ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತರಿಗೆ 2 ಲಕ್ಷ ರೂ., ಗಾಯಗೊಂಡವರಿಗೆ 50 ಸಾವಿರ ರೂ.ಪರಿಹಾರವನ್ನು ಪ್ರಧಾನಿ ಮೋದಿ ಅವರು ಘೋಷಿಸಿದ್ದಾರೆ.
ಇದನ್ನೂ ಓದಿ:ಆಳವಾದ ಕಂದರಕ್ಕೆ ಉರುಳಿದ ಬಸ್; 30 ಮಂದಿ ದುರ್ಮರಣ!ಅಪಘಾತದ ಬಗ್ಗೆ ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ವೇದಿಕೆ X(ಎಕ್ಸ್​) ನಲ್ಲಿ “ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರ ಪರಿಹಾರ ಘೋಷಣೆಯ ನಂತರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಸ್ ಅಪಘಾತಕ್ಕೀಡಾದ ಕಂದಕದಲ್ಲಿ ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ. ಎಲ್ಲ ಗಾಯಾಳುಗಳನ್ನು ಜಮ್ಮು ಜಿಎಂಸಿಗೆ ಕಳುಹಿಸಲಾಗಿದೆ. ಪ್ರಸ್ತುತ, ಜಮ್ಮು ಪೊಲೀಸರು ಬಸ್ ಪತನಕ್ಕೆ ಓವರ್‌ಟೇಕ್ ಕಾರಣವೆಂದು ಪರಿಗಣಿಸಿದ್ದಾರೆ. ಇದರೆ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಂತಾಪ ಸೂಚಿಸಿದ್ದಾರೆ.
ಶುಭ್‌ಮಾನ್ ಗಿಲ್‌ಗೇ ಶುಭ ಹಾರೈಸಿದ್ದೇಕೆ ತೆಂಡೂಲ್ಕರ್ ಪುತ್ರಿ ಸಾರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 7 =
Remember me
