ಅಹಮದಾಬಾದ್:ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರನ್ನು ನೋಡಲು ಮೋದಿ ಆಸ್ಪತ್ರೆಗೆ ಬಂದಿದ್ದಾರೆ.
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಯುಎನ್ ಮೆಹ್ತಾ ಆಸ್ಪತ್ರೆವರೆಗೆ ಬಿಗಿ ಪೊಲೀಸ್ ಬಂದೋಬಸ್ತ್​​ನಲ್ಲಿ ನರೇಂದ್ರ ಮೋದಿ ತಾಯಿಯ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳಿದರು. ಈ ಮಧ್ಯೆ, ಹೀರಾಬೆನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಯುಎನ್​ ಮೆಹ್ತಾ ಆಸ್ಪತ್ರೆ ತಿಳಿಸಿದೆ.
#WATCH| PM Modi arrives at UN Mehta Institute of Cardiology & Research Centre in Ahmedabad where his mother Heeraben Modi is admittedAs per the hospital, her health condition is stable.pic.twitter.com/j9Yp3udunB— ANI (@ANI)December 28, 2022
#WATCH| PM Modi arrives at UN Mehta Institute of Cardiology & Research Centre in Ahmedabad where his mother Heeraben Modi is admittedAs per the hospital, her health condition is stable.pic.twitter.com/j9Yp3udunB
ಮೋದಿ ತಾಯಿ ಹೀರಾಬೆನ್ ಅವರು ಕಳೆದ ಜೂ.18 ರಂದು ನೂರನೇ ವರ್ಷಕ್ಕೆ ಕಾಲಿಟ್ಟಿದ್ದರು. ಇತ್ತೀಚೆಗೆ ಗುಜರಾತ್ ಚುನಾವಣೆಯ ವೇಳೆ ಮೋದಿ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡು ಬಂದಿದ್ದರು.
ಮಂಗಳವಾರ (ಡಿ.27) ರಂದು ಮೈಸೂರಿನ ಕಡಕೊಳ ಬಳಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಅಪಘಾತಕ್ಕೀಡಾಗಿತ್ತು. ಸದ್ಯ ಅವರು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
