ಮಾಸ್ಕೋ:ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ರಾಜಧಾನಿ ಮಾಸ್ಕೋ ತಲುಪಿದ್ದಾರೆ. ಭಾರತೀಯ ಕಾಲಮಾನ ಸಂಜೆ 5 ಗಂಟೆಗೆ ಮಾಸ್ಕೋ ತಲುಪಿದ್ದಾರೆ. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಎರಡು ದಿನಗಳ ಭೇಟಿಗಾಗಿ ರಷ್ಯಾ ತಲುಪಿದ್ದಾರೆ. ಇಲ್ಲಿ ನಡೆಯುವ 22ನೇ ರಷ್ಯಾ-ಭಾರತ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೋದಿ ಅವರನ್ನು ರಷ್ಯಾದ 1ನೇ ಉಪಪ್ರಧಾನಿ (1ನೇ ಡಿಪಿಎಂ) ಡೆನಿಸ್ ಮಂಟುರೋವ್ ಸ್ವಾಗತಿಸಿದರು. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ರಷ್ಯಾ ಭೇಟಿಯ ವೇಳೆ ಅವರನ್ನು ಬರಮಾಡಿಕೊಂಡ ಉಪ ಪ್ರಧಾನಿಗಿಂತ ಮಂಟುರೊವ್ ಹಿರಿಯ ಅಧಿಕಾರಿಯಾಗಿದ್ದಾರೆ.
ಇದನ್ನು ಓದಿ:ಕ್ರಿಮಿನಲ್​ ಕಾನೂನುಗಳ ಬಗೆಗಿನ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್​ ನಾಯಕ ಪಿ.ಚಿದಂಬರಂ
ಮಂಗಳವಾರ (ಜುಲೈ 9) ನಡೆಯಲಿರುವ 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಪುಟಿನ್ ವ್ಯಾಪಾರ, ಇಂಧನ ಮತ್ತು ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳನ್ನು ಬಗ್ಗೆ ಮಾತನಾಡುವ ನಿರೀಕ್ಷೆಯಿದೆ.
ಇಂಧನ, ಭದ್ರತೆ, ವ್ಯಾಪಾರ, ಹೂಡಿಕೆ, ಆರೋಗ್ಯ, ಶಿಕ್ಷಣ, ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ವಿನಿಮಯ ಕ್ಷೇತ್ರಗಳನ್ನು ಒಳಗೊಂಡಂತೆ ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯು ಕಳೆದ 10 ವರ್ಷಗಳಿಂದ ಮುಂದುವರಿದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಹಕಾರದ ಎಲ್ಲಾ ಅಂಶಗಳನ್ನು ಪರಿಶೀಲಿಸಲು ಎದುರು ನೋಡುತ್ತಿದ್ದೇನೆ ಮತ್ತು ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗೆಗಿನ ದೃಷ್ಟಿಕೋನಗಳನ್ನು ಹಂಚಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.
ರಷ್ಯಾದೊಂದಿಗಿನ ಭಾರತದ ವ್ಯಾಪಾರ ಅಸಮತೋಲನವನ್ನು ಸರಿಪಡಿಸುವುದು ಮತ್ತು ಉಕ್ರೇನ್ ಯುದ್ಧದಲ್ಲಿ ಹೋರಾಡಲು ದಾರಿತಪ್ಪಿದ ಭಾರತೀಯ ನಾಗರಿಕರನ್ನು ಬಿಡುಗಡೆ ಮಾಡಿಸುವುದು ಪ್ರಧಾನಿ ಮೋದಿ ಅವರ ಮಾಸ್ಕೋ ಭೇಟಿಯ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಭಾರತೀಯ ಉನ್ನತ ಅಧಿಕಾರಿಯೊಬ್ಬರು ಕಳೆದ ವಾರ ಹೇಳಿದ್ದಾರೆ.(ಏಜೆನ್ಸೀಸ್​​)
ಸಚಿವ ಸಂಪುಟ ವಿಸ್ತರಣೆ; 15 ನಿಮಿಷಗಳಲ್ಲಿ ಎರಡು ಬಾರಿ ಪ್ರಮಾಣವಚನ ಸ್ವೀಕರಿಸಿದ ಸಚಿವ.. ಕಾರಣವೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 12 =
Remember me
