ವಿಶಾಖಪಟ್ಟಣ:ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮಲ್ಟಿನ್ಯಾಶನಲ್​ ರಾಸಾಯನಿಕ ಕಂಪನಿಯೊಂದರಲ್ಲಿ ವಿಷ ಅನಿಲ ಸೋರಿಕೆಯಾಗಿ ಸುಮಾರು ಎಂಟು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ. 200ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.
ಇದನ್ನೂ ಓದಿ:ವಿಷಕಾರಿ ಅನಿಲ ಸೋರಿಕೆಯಿಂದ 6 ಜನ ಕಾರ್ಮಿಕರ ಸಾವು
ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ಆಂಧ್ರಪ್ರದೇಶ ಗೃಹಸಚಿವಾಲಯದ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್​ಡಿಎಂಎ) ಸಿಬ್ಬಂದಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಘಟನೆಯ ಸಂಪೂರ್ಣ ವರದಿ ಕೇಳಿದ್ದಾರೆ. ಹಾಗೇ ಸ್ಥಳದಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಯ ಬಗ್ಗೆಯೂ ವಿಚಾರಿಸಿದ್ದಾರೆ.
ನಂತರ ಟ್ವೀಟ್ ಮಾಡಿರುವ ಮೋದಿಯವರು, ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಿಂದ ಕಷ್ಟಪಡುತ್ತಿರುವ ಎಲ್ಲರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಲಾಕ್​ಡೌನ್​ ಮಧ್ಯೆ ಗುಜರಾತ್​ನ ದೇವಸ್ಥಾನದಲ್ಲಿ ಕಂತೆ ಕಂತೆ ನಕಲಿ ನೋಟುಗಳು ವಶ? ಫ್ಯಾಕ್ಟ್​ಚೆಕ್​ನಲ್ಲಿ ಸತ್ಯಾಂಶ!
ವಿಶಾಖಪಟ್ಟಣಂನ ಆರ್​ಆರ್ ವೆಂಕಟಪುರಂ ಎಂಬ ಹಳ್ಳಿಯಲ್ಲಿ ಇರುವ ಎಲ್​.ಜಿ ಪಾಲಿಮರ್ಸ್​ ಇಂಡಿಯಾ ಪ್ರವೈಟ್​ ಲಿಮಿಟೆಡ್​ ಕೆಮಿಕಲ್​ ಫ್ಯಾಕ್ಟರಿಯಲ್ಲಿ ನಡೆದ ಈ ದುರಂತದಲ್ಲಿ ಪುಟ್ಟ ಮಗು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಸುಮಾರು 2000 ಮೆಟ್ರಿಕ್​ ಟನ್​ಗಳಷ್ಟು ವಿಷ ಅನಿಲ ಸೋರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಎನ್​ಡಿಎಂಎ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಕೆಲವೇ ಹೊತ್ತಲ್ಲಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fourteen =
Remember me
