ನವದೆಹಲಿ:ಯೂಕ್ರೇನ್​ನಲ್ಲಿ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಸಾವಿಗೀಡಾದ ಕರ್ನಾಟಕದ ವಿದ್ಯಾರ್ಥಿ, ಹಾವೇರಿ ಜಿಲ್ಲೆಯ ನವೀನ್ ಗ್ಯಾನಗೌಡರ ಅವರ ಸಾವು ಕುಟುಂಬಸ್ಥರನ್ನು ತೀವ್ರ ದುಃಖಕ್ಕೀಡು ಮಾಡಿದ್ದು ಒಂದೆಡೆಯಾದರೆ, ಮತ್ತೊಂದೆಡೆ ವಿದ್ಯಾರ್ಥಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ಕರೆತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಯೂಕ್ರೇನ್​ನಲ್ಲಿ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕರ್ನಾಟಕದ ಹಾವೇರಿ ಜಿಲ್ಲೆಯ ಯುವಕ ಬಲಿಯಾದ ಎಂಬುದು ತಿಳಿದು ಬರುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃತನ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರ ಕಾರ್ಯಾಲಯ ಕೂಡ ಸ್ಪಂದಿಸಿದ್ದು, ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ರಷ್ಯಾದ ಕ್ಷಿಪಣಿಗೆ ಬಲಿಯಾದ ಕನ್ನಡಿಗ ನವೀನ್​ ಶೇಖರಪ್ಪ ಅವರ ತಂದೆಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಲ್ಲದೆ, ಸಾಂತ್ವನವನ್ನು ಹೇಳಿದ್ದಾರೆ. ಅಲ್ಲದೆ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಕೂಡ ಸಂತಾಪ ಸೂಚಿಸಿ, ಸಾಂತ್ವನ ಹೇಳಿದ್ದಾರೆ.
70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!

ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಮಹಿಳೆ; ಅಪಾಯವನ್ನು ಅಂದಾಜಿಸಿ ಧಾವಿಸಿ ರಕ್ಷಿಸಿದ ಪೊಲೀಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − five =
Remember me
