ಬೆಂಗಳೂರು:ಬಾಲಿವುಡ್ ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ‘ಚಿತ್ರರಂಗದಲ್ಲಿ ಪ್ರಕಾಶಮಾನವಾಗಿ ಬೆಳೆಯುತ್ತಿದ್ದ ಯುವನಟ ಬಹುಬೇಗ ನಮ್ಮನ್ನೆಲ್ಲ ಬಿಟ್ಟು ಬಾರದ ಲೋಕಕ್ಕೆ ಹೋಗಿದ್ದಾರೆ…’ ಎಂದಿದ್ದಾರೆ.
ಮುಂಬೈನ ಬಾಂದ್ರಾದ ತಮ್ಮ ನಿವಾಸದಲ್ಲಿ ಸುಶಾಂತ್​ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರತಿಭಾವಂತ ನಟನನ್ನು ಕಳೆದುಕೊಂಡ ಬಾಲಿವುಡ್​ನಲ್ಲಿ ಕಾರ್ಮೋಡ ಕವಿದಿದೆ. ಬಾಲಿವುಡ್​ ದಿಗ್ಗಜರಾದಿಯಾಗಿ… ದೇಶದಾದ್ಯಂತ ಸುಶಾಂತ್​ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಅಗಲಿದ ನಟನಿಗೆ ಟ್ವಿಟರ್​ನಲ್ಲಿ ಪ್ರಧಾನಿ ಸಂತಾಪ ಸೂಚಿಸಿದ್ದು, ಅದರ ವಿವರ ಇಲ್ಲಿದೆ.
ಇದನ್ನೂ ನೋಡಿಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ
”ಸುಶಾಂತ್ ಸಿಂಗ್ ರಜಪೂತ್… ಪ್ರಕಾಶಮಾನವಾಗಿ ಬೆಳೆಯುತ್ತಿದ್ದ ಯುವನಟ ಬಾರದ ಲೋಕಕ್ಕೆ ಬಹುಬೇಗನೇ ಹೋದರು. ಟಿವಿ ಮತ್ತು ಚಲನಚಿತ್ರಗಳಲ್ಲಿ ಉತ್ತಮ ಸಾಧನೆ ತೋರಿದರು. ಮನರಂಜನಾ ಜಗತ್ತಿನಲ್ಲಿ ಸುಶಾಂತ್​ ಮಾಡಿದ ಸಾಧನೆ ಹಲವರಿಗೆ ಸ್ಫೂರ್ತಿಯಾಗಿತ್ತು. ಹಲವಾರು ಸ್ಮರಣೀಯ ಪ್ರದರ್ಶನಗಳನ್ನು ನಮ್ಮ ನಡುವೆಯೇ ಬಿಟ್ಟು ಹೋಗಿದ್ದಾರೆ. ಸುಶಾಂತ್​ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ. ಓಂ ಶಾಂತಿ” ಎಂದು ನರೇಂದ್ರ ಮೋದಿ ಟ್ವಿಟರ್​ನಲ್ಲಿ ತಿಳಿಸಿದ್ದಾರೆ.
Sushant Singh Rajput…a bright young actor gone too soon. He excelled on TV and in films. His rise in the world of entertainment inspired many and he leaves behind several memorable performances. Shocked by his passing away. My thoughts are with his family and fans. Om Shanti.
— Narendra Modi (@narendramodi)June 14, 2020

ಇದನ್ನೂ ನೋಡಿಬದುಕು ಕ್ಷಣಿಕ ಎಂದಿದ್ದೇಕೆ ಸುಶಾಂತ್​ ಸಿಂಗ್​; ಅಮ್ಮನ ನೆನೆದು ಬಾರದ ಲೋಕಕ್ಕೆ ಪಯಣ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + 17 =
Remember me
