ನವದೆಹಲಿ:ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವಿನ ಹಿನ್ನೆಲೆಯಲ್ಲಿ ಹಲವು ರಾಷ್ಟ್ರಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.
ಇದನ್ನೂ ಓದಿ:‘ಎನ್​ಡಿಎ ಭಾಗವಾಗಿಯೇ ಇರ್ತೇವೆ’: ಚಂದ್ರಬಾಬು ನಾಯ್ಡು
ಮೋದಿ ಅವರು ಭಾರತದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ವಿವಿಧ ದೇಶಗಳ ಮುಖ್ಯಸ್ಥರು, ಮೋದಿ ನೇತೃತ್ವದ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ.
ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದೆ. ಇದು ದೇಶದ ಏಕೈಕ ದೊಡ್ಡ ಪಕ್ಷವಾಗಿದೆ. ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚಿಸಲು ಅಗತ್ಯವಿರುವ 272 ಸ್ಥಾನಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಹಿನ್ನೆಲೆಯಲ್ಲಿ ಟಿಡಿಪಿ, ಜೆಡಿಯು ಸೇರಿದಂತೆ ಇತರೆ ಮಿತ್ರಪಕ್ಷಗಳೊಂದಿಗೆ ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಸಜ್ಜಾಗಿದೆ.
“2024 ರ ಭಾರತೀಯ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಗೆದ್ದಿರುವ ಪ್ರಧಾನಿ ಮೋದಿ, ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟಕ್ಕೆ ಅಭಿನಂದನೆಗಳು. ಭಾರತ ಮತ್ತು ಮಾಲ್ಡೀವ್ಸ್ ಜನರ ಕಲ್ಯಾಣ ಮತ್ತು ಹಿತಾಸಕ್ತಿಗಳಿಗಾಗಿ ನಾವು ಒಟ್ಟಾಗಿ ಕೆಲಸ ಮಾಡಲು ಸಿದ್ಧರಿದ್ದೇವೆ” ಎಂದು ಮಾಲ್ಡೀವ್ಸ್ ನ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ತಿಳಿಸಿದ್ದಾರೆ.
“ಚುನಾವಣೆಯಲ್ಲಿ ಜಯಗಳಿಸಿದ ಮೋದಿಯವರಿಗೆ ಅಭಿನಂದನೆಗಳು. ಸಾಮಾನ್ಯರ ಒಳಿತಿಗಾಗಿ ಕೆಲಸ ಮಾಡಲು ನಾವು ನಿಮಗೆ ಶುಭ ಹಾರೈಸುತ್ತೇವೆ. ಇಟಲಿ ಮತ್ತು ಭಾರತದ ನಡುವಿನ ಸಂಬಂಧವನ್ನು ಬಲಪಡಿಸಲು ನಾವು ಕೆಲಸ ಮಾಡುತ್ತೇವೆ. ಎರಡೂ ದೇಶಗಳ ಯೋಗಕ್ಷೇಮಕ್ಕಾಗಿ ನಾವು ಸಹಕಾರದಲ್ಲಿ ಮುನ್ನಡೆಯುತ್ತೇವೆ ಎಂದು ಇಟಲಿ ಅಧ್ಯಕ್ಷ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ.
“ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನನ್ನ ಶುಭಾಶಯಗಳು. ಜನರು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸಾಧಿಸಿದ ಪ್ರಗತಿ ಮತ್ತು ಸಮೃದ್ಧಿಯ ಮೇಲೆ ನಂಬಿಕೆ ಇಟ್ಟಿದ್ದಾರೆ. ನೆರೆಯ ರಾಷ್ಟ್ರವಾಗಿ ಭಾರತದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಶ್ರೀಲಂಕಾ ಎದುರು ನೋಡುತ್ತಿದೆ” ಎಂದು ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮ ಸಿಂಘೆ ಶುಭಹಾರೈಸಿದ್ದಾರೆ.
“ಐತಿಹಾಸಿಕ ಮೂರನೇ ಅವಧಿಯ ವಿಜಯಕ್ಕಾಗಿ ಪ್ರಧಾನಿ ಮೋದಿಗೆ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವವು ಗಮನಾರ್ಹ ಪ್ರಗತಿಯನ್ನು ಸಾಧಿಸುವುದನ್ನು ಮುಂದುವರಿಸುತ್ತದೆ. ಮಾರಿಷಸ್ ಭಾರತದ ವಿಶೇಷ ಬಾಂಧವ್ಯ ಚಿರಾಯುವಾಗಲಿ” ಎಂದು ಮಾರಿಷಸ್​ ಪ್ರಧಾನಿ ವಿಂದ್ ಕುಮಾರ್ ಆಶಿಸಿದ್ದಾರೆ.
“ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎನ್‌ಡಿಎ ಸತತ ಮೂರನೇ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು. ಭಾರತದ ಜನರ ಉತ್ಸಾಹದ ಭಾಗವಹಿಸುವಿಕೆಯೊಂದಿಗೆ ವಿಶ್ವದ ಅತಿದೊಡ್ಡ ಪ್ರಜಾಸತ್ತಾತ್ಮಕ ಕಸರತ್ತು ಯಶಸ್ವಿಯಾಗಿ ಪೂರ್ಣಗೊಂಡಿರುವುದಕ್ಕೆ ನಮಗೆ ಸಂತೋಷವಾಗಿದೆ” ಎಂದು ನೇಪಾಳದ ಪ್ರಧಾನಿ ಪ್ರಚಂಡ ಅಭಿನಂದಿಸಿದ್ದಾರೆ.
“ಐತಿಹಾಸಿಕ ಸತತ ಮೂರನೇ ಗೆಲುವಿಗಾಗಿ ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಗೆ ಅಭಿನಂದನೆಗಳು. ಭಾರತವು ಹೆಚ್ಚಿನ ಎತ್ತರಕ್ಕೆ ಏರಿದಾಗ ನಾವು ಅದರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ” ಎಂದು ಭೂತಾನ್ ಪ್ರಧಾನಿ ತ್ಶೆರಿಂಗ್ ಥೋಲ್ಗೆ ಅಭಿಪ್ರಾಯಪಟ್ಟಿದ್ದಾರೆ.
ಉತ್ತರಾಖಂಡಕ್ಕೆ ತೆರಳಿದ್ದ ಕರ್ನಾಟಕದ ಚಾರಣಿಗರಲ್ಲಿ ನಾಲ್ವರ ಸಾವು, ಇಬ್ಬರ ರಕ್ಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + ten =
Remember me
