ನವದೆಹಲಿ:ಕರ್ನಾಟಕ ಸೇರಿದಂತೆ ದೇಶದಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ.ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಐತಿಹಾಸಿಕ‌ ಪರೇಡ್ ನಡೆಯಿತು. ಈ ಬಾರಿ ‘ವಿಕಸಿತ ಭಾರತ’ ಮತ್ತು ‘ಭಾರತ್-ಲೋಕತಂತ್ರ ಕಿ ಮಾತೃಕಾʼ ಗಣರಾಜ್ಯೋತ್ಸವ ಪರೇಡ್ ಥೀಮ್ ಆಗಿದ್ದು, ಕರ್ತವ್ಯ ಪಥದಲ್ಲಿ ಸ್ತಬ್ಧಚಿತ್ರಗಳ ಕಲರವ ಮನೆ ಮಾಡಿತ್ತು.
ಇದನ್ನೂ ಓದಿ:ಒಂದು ರಿಯಾಲಿಟಿ ಶೋ ಹಾಗೆ ಮಾಡೋದು ತಪ್ಪು: ನಮ್ರತಾ
ಪರೇಡ್‍ನಲ್ಲಿ ಡಿಆರ್‍ಡಿಓ ಸ್ತಬ್ಧಚಿತ್ರ ಸೇರಿದಂತೆ ಚಂದ್ರಯಾನ-3, ಲಡಾಕ್‍ನಲ್ಲಿ ಭಾರತೀಯ ಸೇನೆ, ಮಹಾರಾಷ್ಟ್ರದ ಛತ್ರಪತಿ ಶಿವಾಜಿ ಬಾಲ್ಯದ ಸ್ತಬ್ಧಚಿತ್ರ, ರಾಜಸ್ಥಾನದ ಮಹಿಳೆಯ ಕಲಾತ್ಮಕ ನೃತ್ಯ, ಛತ್ತೀಸ್‍ಗಢದ ಬಸ್ತಾರ್ ಮುರಿಯಾ ದರ್ಬಾರ್, ಒಡಿಶಾದ ವಿಕಾಸ್ ಭಾರತದ ಅಡಿ ಮಹಿಳಾ ಸಬಲೀಕರಣದ ಸ್ತಬ್ಧಚಿತ್ರ, ಹರಿಯಾಣದ ಬಾಲಕಿಯರ ಶಿಕ್ಷಣಕ್ಕೆ ಬೆಂಬಲ ಸೂಚಿಸುವ ಸ್ತಬ್ಧಚಿತ್ರ, ಸೇರಿದಂತೆ ಆಕರ್ಷಕ ಪಥಸಂಚಲನದಲ್ಲಿ ಭಾರತೀಯ ಸೇನಾಪಡೆಯ ಮೂರು ದಳಗಳ ಶಕ್ತಿ ಸಾಮಥ್ರ್ಯ ಪ್ರದರ್ಶಿಸುವ ಕೆಲಸ ನಡೆಯಿತು.
ಪಥ ಸಂಚಲನದಲ್ಲಿ ಪಿನಾಕಾ ರಾಕೆಟ್ ಲಾಂಚರ್, ಶಸ್ತ್ರಾಸ್ತ್ರ ಪತ್ತೆಹಚ್ಚುವ ರಾಡರ್ ಸಿಸ್ಟಮ್, ಸರ್ವತ್ರ ಮೊಬೈಲ್ ಬ್ರಿಡ್ಜಿಂಗ್ ಸಿಸ್ಟಮ್, ಡ್ರೋನ್ ಜಾಮರ್ ಸಿಸ್ಟಮ್, ಪ್ರಚಂಡ, ರುದ್ರ ಹೆಲಿಕಾಪ್ಟರ್, ಸ್ವದೇಶಿ ನಿರ್ಮಿತ ಸೇನಾ ಶಸ್ತ್ರಾಸ್ತ್ರಗಳ ಪ್ರದರ್ಶನ, ಸಿಆರ್‍ಪಿಎಫ್ ಬ್ಯಾಂಡ್ ಪಥಸಂಚಲನ, ಬಿಎಸ್‍ಎಫ್ ಒಂಟೆ ರೆಜಿಮೆಂಟ್ ಪರೇಡ್ ನಡೆಸಿಕೊಡಲಾಯಿತು. ಜೊತೆಗೆ ಭಾರತೀಯ ವಾಯುಪಡೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಕೇಂದ್ರ ಸಶಸ್ತ್ರ ಪೆÇಲೀಸ್ ಪಡೆ ಸೇರಿದಂತೆ ವಿವಿಧ ಭದ್ರತಾ ಪಡೆಗಳು ಪರೇಡ್‍ನಲ್ಲಿ ಸೇನಾ ಸಾಮಥ್ರ್ಯ ಪ್ರದರ್ಶಿಸಿ ಗಮನ ಸೆಳೆದವು
ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ:ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ ಕರ್ನಾಟಕದ 9 ಮಂದಿ ಸೇರಿ 132 ಸಾಧಕರಿಗೆ ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
‘ಪದ್ಮ’ ಪ್ರಶಸ್ತಿ ಭಾಜನರಾದ 9 ಕನ್ನಡಿಗರು:ಪದ್ಮಭೂಷಣ ಪ್ರಶಸ್ತಿಗೆ ಕನ್ನಡಿಗರಾದ ಸೀತಾರಾಮ್‌ ಜಿಂದಾಲ್‌ (ವ್ಯಾಪಾರ ಮತ್ತು ಕೈಗಾರಿಕೆ) ಭಾಜನರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ರೋಹನ್‌ ಮಾಚಂಡ ಬೋಪಣ್ಣ (ಕ್ರೀಡೆ), ಪ್ರೇಮಾ ಧನರಾಜ್‌ (ವೈದ್ಯಕೀಯ), ಅನುಪಮಾ ಹೊಸಕೆರೆ (ಕಲೆ), ಶ್ರೀಧರ್‌ ಮಕಮ್‌ ಕೃಷ್ಣಮೂರ್ತಿ (ಸಾಹಿತ್ಯ ಮತ್ತು ಶಿಕ್ಷಣ), ಕೆ.ಎಸ್‌.ರಾಜಣ್ಣ (ಸಾಮಾಜಿಕ ಕಾರ್ಯ), ಚಂದ್ರಶೇಖರ್‌ ಚನ್ನಪಟ್ಟಣ ರಾಜಣ್ಣಾಚಾರ್‌ (ವೈದ್ಯಕೀಯ), ಸೋಮಣ್ಣ (ಸಾಮಾಜಿಕ ಕಾರ್ಯ), ಶಶಿ ಸೋನಿ (ವ್ಯಾಪಾರ ಮತ್ತು ಕೈಗಾರಿಕೆ).
ಭಾರತೀಯ ವಿದ್ಯಾರ್ಥಿಗಳಿಗೆ ಫ್ರಾನ್ಸ್ ನೆರವು : ಮ್ಯಾಕ್ರನ್

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:sixteen + twenty =
Remember me
