ನವದೆಹಲಿ:ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಟ್ವಿಟರ್​ ಫಾಲೋವರ್ಸ್​ ಸಂಖ್ಯೆ ಇಂದು 60 ಮಿಲಿಯನ್ ಅಂದರೆ 6 ಕೋಟಿ ತಲುಪಿದೆ.
ಮೋದಿಯವರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಇದೀಗ ಟ್ವಿಟರ್​ ಫಾಲೋವರ್ಸ್​ ಸಂಖ್ಯೆ 6 ಕೋಟಿ ಮೀರಿದೆ. ಈ ಮೂಲಕ ಭಾರತದಲ್ಲಿ ಅತ್ಯಂತ ಹೆಚ್ಚು ಟ್ವಿಟರ್​ ಫಾಲೋವರ್ಸ್​ ಹೊಂದಿದ ನಾಯಕರಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರು 2009ರಲ್ಲಿ, ಅಂದರೆ ಗುಜರಾತ್​ ಮುಖ್ಯಮಂತ್ರಿಯಾಗಿದ್ದಾಗ ಟ್ವಿಟರ್​ ಖಾತೆ ಪ್ರಾರಂಭಿಸಿದ್ದಾರೆ. ನಂತರ 2014ರಲ್ಲಿ ಅವರು ಪ್ರಧಾನಿ ಹುದ್ದೆಗೇರಿದಾಗ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಅದರಲ್ಲೂ ಟ್ವಿಟರ್​​ನಲ್ಲಂತೂ ಸದಾ ಸಕ್ರಿಯರಾಗಿರುತ್ತಾರೆ. ಜನಸಾಮಾನ್ಯರೊಂದಿಗೆ ಕನೆಕ್ಟ್ ಆಗುತ್ತಾರೆ.
ಟ್ವಿಟರ್​​ನಲ್ಲಿ ಅತ್ಯಂತ ಹೆಚ್ಚು ಫಾಲೋವರ್ಸ್ ಹೊಂದಿದ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸದ್ಯ ಮೂರನೇ ಸ್ಥಾನದಲ್ಲಿದ್ದಾರೆ.
ಅಮರಿಕದ ಮಾಜಿ ಅಧ್ಯಕ್ಷ ಬರಾಕ್​ ಒಬಾಮಾ ಅವರು 120 ಮಿಲಿಯನ್​ ಫಾಲೋವರ್ಸ್​ ಹೊಂದಿದ್ದು ಮೊದಲ ಸ್ಥಾನದಲ್ಲಿ ಇದ್ದಾರೆ. ಹಾಗೇ 83 ಮಿಲಿಯನ್​ಗೂ ಹೆಚ್ಚು ಫಾಲೋವರ್ಸ್ ಹೊಂದಿರುವ ಯುಎಸ್​ನ ಈಗಿನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಪ್ರಧಾನಿ ಮೋದಿಯವರು 60 ಮಿಲಿಯನ್​ (6 ಕೋಟಿ) ಅನುಯಾಯಿಗಳನ್ನು ಹೊಂದುವ ಮೂಲಕ ಮೂರನೇ ಸ್ಥಾನಕ್ಕೇರಿದ್ದಾರೆ.
ಇನ್ನು ಗೃಹ ಸಚಿವ ಅಮಿತ್​ ಷಾ ಅವರು 2013ರ ಮೇ ತಿಂಗಳಲ್ಲಿ ಟ್ವಿಟರ್​ ಅಕೌಂಟ್ ಖಾತೆ ಪ್ರಾರಂಭಿಸಿದ್ದು 2 ಕೋಟಿ 16 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ. ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿಯವರೂ ಸದಾ ಟ್ವಿಟರ್​ನಲ್ಲಿ ಸಕ್ರಿಯರಾಗಿರುತ್ತಾರೆ. 2015ರ ಏಪ್ರಿಲ್​ನಿಂದ ಟ್ವಿಟರ್​ ಪ್ರಾರಂಭಿಸಿರುವ ರಾಹುಲ್​ ಗಾಂಧಿಯವರು 1 ಕೋಟಿ 52 ಲಕ್ಷ ಫಾಲೋವರ್ಸ್​​ನ್ನು ಹೊಂದಿದ್ದಾರೆ. (ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − six =
Remember me
