ನವದೆಹಲಿ:ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿರುವ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ, ವಿನೇಶ್ ಅವರ ತೂಕ 50 ಕೆಜಿ 100 ಗ್ರಾಂ ಇದ್ದು, ಆಕೆಯನ್ನು ಅನರ್ಹಗೊಳಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ​​ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ಹೇಳಿದರು.
ಇದನ್ನು ಓದಿ:ಸನಾತನ ಧರ್ಮದ ಉಳಿವಿಗೆ ಒಗ್ಗಟ್ಟಿನಿಂದ ಹೋರಾಡಬೇಕು; ಯೋಗಿ ಆದಿತ್ಯನಾಥ್​​​
ವಿನೇಶ್ ಅವರು 50 ಕೆ.ಜಿ. ವಿಭಾಗದಲ್ಲಿ ಆಡುತ್ತಿದ್ದರು. UWW ನ ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ, ಎಲ್ಲಾ ವಿಭಾಗಗಳಾದ್ಯಂತ ಕ್ರೀಡಾಪಟುಗಳ ತೂಕವನ್ನು ಪ್ರತಿದಿನ ಬೆಳಗ್ಗೆ ಅಳೆಯಲಾಗುತ್ತದೆ. ವಿನೇಶ್ ಅವರ ತೂಕ 50 ಕೆಜಿ ಮತ್ತು 100 ಗ್ರಾಂ ಎಂದು ಕಂಡುಬಂದಿದೆ. ಅದರ ನಂತರ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಮಾಂಡವಿಯಾ ತಿಳಿಸಿದರು.
ಪ್ಯಾರಿಸ್ ಒಲಿಂಪಿಕ್ಸ್‌ನ ಸ್ಪರ್ಧೆಯಿಂದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಹೊರಗಿಡುವ ವಿಷಯದಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಒಲಿಂಪಿಕ್ ಸಂಸ್ಥೆಗೆ (ಐಒಎ) ಸೂಚಿಸಿದ್ದಾರೆ. ಐಒಎ ಮುಖ್ಯಸ್ಥೆ ಪಿಟಿ ಉಷಾ ಪ್ಯಾರಿಸ್‌ನಲ್ಲಿದ್ದು, ಪ್ರಧಾನಿ ಅವರೇ ಅವರೊಂದಿಗೆ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಸೂಕ್ತ ಕ್ರಮಕೈಗೊಳ್ಳುವಂತೆ ಪ್ರಧಾನಿ ಪಿ.ಟಿ.ಉಷಾ ಅವರಿಗೆ ತಿಳಿಸಿದ್ದಾರೆ ಎಂದು ಹೇಳಿದರು.
ವಿನೇಶ್ ಫೋಗಟ್ ಅವರಿಗೆ ಸರ್ಕಾರವು ಎಲ್ಲಾ ರೀತಿಯ ಕ್ರೀಡಾ ಸೌಲಭ್ಯಗಳನ್ನು ಮತ್ತು ತರಬೇತಿಯನ್ನು ನೀಡಿದೆ. ಪ್ಯಾರಿಸ್ ಒಲಿಂಪಿಕ್ಸ್​​ಗಾಗಿ ವಿನೇಶ್​​ಗೆ 70 ಲಕ್ಷದ 45 ಸಾವಿರದ 775 ರೂಪಾಯಿಗಳ ನೆರವು ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಲೈಂಗಿಕ ಕಿರುಕುಳದ ಆರೋಪದ ಮೇಲೆ ಮಾಜಿ ಕುಸ್ತಿ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಫೋಗಟ್, ಒಲಿಂಪಿಕ್ಸ್ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಇತಿಹಾಸ ನಿರ್ಮಿಸಿದ್ದಾರೆ.(ಏಜೆನ್ಸೀಸ್​​)
ಎಲಾನ್​ ಮಸ್ಕ್​​ ಜತೆಗಿನ ಸಂದರ್ಶನದ ಮಾಹಿತಿ ಹಂಚಿಕೊಂಡ ಡೊನಾಲ್ಡ್​​ ಟ್ರಂಪ್​​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 16 =
Remember me
