ನವ ದೆಹಲಿ:ರಸಗೊಬ್ಬರದ ಗುಣಮಟ್ಟ ಹಾಗೂ ಉತ್ಪಾದನಾ ತಂತ್ರಜ್ಞಾನದಲ್ಲಿ ಕ್ಷೇತ್ರದಲ್ಲಿ ಬದಲಾವಣೆಯಾಗುತ್ತಿದೆ. ಈ ಬೆಳವಣಿಗೆ ಕೃಷಿ ಉತ್ಪನ್ನಗಳ ಉತ್ಪಾದನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪೂರಕವಾಗುತ್ತದೆ. ಜತೆಗೆ ಎಲ್ಲಾ ಕೃಷಿ ಬೆಳೆ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಶೀಘ್ರದಲ್ಲಿ ಭಾರತ ಜಾಗತಿಕವಾಗಿ ಕೃಷಿ ಉತ್ಪನ್ನಗಳ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ವೇಳೆ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಿದರು.
ಕೃಷಿ ಕ್ಷೇತ್ರವನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಹಾಗೂ ರೈತರನ್ನು ಸಬಲರನ್ನಾಗಿಸುವ ಸಲುವಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದಾದ್ಯಂತ ಇಂದು 600ಕ್ಕೂ ಅಧಿಕ ಪಿಎಂ ಕಿಸಾನ್ ಕೇಂದ್ರಗಳಿದ್ದು, ರಸಗೊಬ್ಬರ ಉತ್ಪಾದನಾ ಕೇತ್ರದಲ್ಲಿ ಭಾರತ ಪ್ರಭುತ್ವ ಸಾಧಿಸಲಿದೆ. ಪಿಎಂ ಕಿಸಾನ್ ಯೋಜನೆಯ ಮೂಲಕ ಈಗಾಗಲೇ ರೈತರಿಗೆ 16 ಸಾವಿರ ಕೋಟಿ ರೂ. ಮೌಲ್ಯದ 12ನೇ ಕಂತು ನೇರವಾಗಿ ಜಮೆ ಆಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡಗಡೆಯ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಭಾಗವಹಿಸಿದರು. ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳು ಕಾರ್ಯಕ್ರಮವನ್ನು ವೀಕ್ಷಿಸಿದರು.
Delhi | We're giving importance to drip irrigation & use of sprinklers to conserve water and maintain soil health. We have also given utter importance to natural farming which has led to a multi-fold increase in production: PM Modipic.twitter.com/WYvdTRGbQT— ANI (@ANI)October 17, 2022
Delhi | We're giving importance to drip irrigation & use of sprinklers to conserve water and maintain soil health. We have also given utter importance to natural farming which has led to a multi-fold increase in production: PM Modipic.twitter.com/WYvdTRGbQT
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
