ಲಖನೌ:ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಮತ್ತು ಹಾಲಿನ ಕಂಟೈನರ್‌ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟ 18 ಮಂದಿಯ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಬುಧವಾರ ಘೋಷಿಸಿದ್ದಾರೆ.
ಇದನ್ನೂ ಓದಿ:ಕಾರು ಹರಿದು ಆಮೆಯ ಚಿಪ್​ ಛಿದ್ರ! ಸೂಪರ್​ಗ್ಲೂ ಬಳಸಿ ಮೂಕಜೀವಿಗೆ ಮರುಜೀವ
ಪ್ರಧಾನಮಂತ್ರಿ ಕಾರ್ಯಾಲಯ ಹೊರಡಿಸಿದ ಅಧಿಕೃತ ಹೇಳಿಕೆಯಲ್ಲಿ, “ಉನ್ನಾವ್ ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಸಂಬಂಧಿಕರಿಗೆ ಪಿಎಂಎನ್​ಆರ್​ಎಫ್​ ನಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದೆ.
ಮುಂಜಾನೆ 5:15ಕ್ಕೆ ಅಪಘಾತ ನಡೆದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಮಾಜಿಕ ಮಾಧ್ಯಮ X ನಲ್ಲಿ “ಅಪಘಾತವು ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಬರೆದಿದ್ದಾರೆ,.”
ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಬಿಹಾರದ ಮೋತಿಹಾರಿಯಿಂದ ದೆಹಲಿಗೆ ಹೋಗುತ್ತಿದ್ದಾಗ ಬೆಹ್ತಮುಜ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಧಾ ಗ್ರಾಮದ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಹಿಂದಿನಿಂದ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.
ಹಿಂದಿ ಹಾಡುಗಳಿಗೆ ರಷ್ಯಾ ಕಲಾವಿದರ ನೃತ್ಯ..ಪ್ರಧಾನಿ ಮೋದಿ ಸ್ವಾಗತಿಸಿದ ಹಿರಿಯ ಉಪ ಪ್ರಧಾನಿ ಮಂಟುರೊವ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 5 =
Remember me
