ತಮಿಳುನಾಡು:ಇಂದು ತಮಿಳುನಾಡಿನ ತಿರುಪತ್ತೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ 2 ಲಕ್ಷ ರೂ. ಮತ್ತು ಗಂಭೀರ ಗಾಯಗೊಂಡವರಿಗೆ 50,000 ರೂ.ಗಳನ್ನು ಘೋಷಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರು ದಿಂಡಿಗಲ್ ಎನ್ ಎಚ್ ಸಮಸ್ಯೆ ಪರಿಹರಿಸಲು ಪ್ರತಿಭಟನೆ
ಘಟನೆ ನೆನೆದು ಸಂತಾಪ ಸೂಚಿಸಿದ ಪ್ರಧಾನಿ, ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಘೋಷಣೆ ಮಾಡಿದ್ದಾರೆ.
“ತಮಿಳುನಾಡಿನ ತಿರುಪತ್ತೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ಉಂಟಾದ ಪ್ರಾಣಹಾನಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.
ಇದನ್ನೂ ಓದಿ:ಉಚಿತ ಕೊಡುಗೆ ತಂದ ಸಂಕಷ್ಟ ಗಣೇಶಮೂರ್ತಿ ತಯಾರಕರ ಅಳಲು
ಘಟನೆಯ ವಿವರ:ಸೋಮವಾರ ಮುಂಜಾನೆ ತಮಿಳುನಾಡಿನ ತಿರುಪತ್ತೂರ್ ಜಿಲ್ಲೆಯ ನಟ್ರಂಪಳ್ಳಿ ಬಳಿ ರಸ್ತೆಯಲ್ಲಿ ನಿಂತಿದ್ದ ಟೂರಿಸ್ಟ್ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಏಳು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ 10 ಜನರು ಗಂಭೀರವಾಗಿ ಗಾಯಗೊಂಡಿದ್ದು, ಮೃತರೆಲ್ಲರೂ ಒಂದೇ ಗ್ರಾಮದವರು ಎಂದು ವರದಿ ತಿಳಿಸಿದೆ. ಕುಟುಂಬದವರು ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ,(ಏಜೆನ್ಸೀಸ್).
‘ಬುದ್ದಿವಂತ’ ನಟನ ಜನ್ಮದಿನಕ್ಕೆ ರಿಲೀಸ್​ ಆಗಲಿದೆ ‘ಯುಐ’ ಟೀಸರ್; ಹೆಚ್ಚಾಯ್ತು ಉಪ್ಪಿ ಫ್ಯಾನ್ಸ್​ಗಳ ಕಾತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
