ಅಯೋಧ್ಯೆ:ಕೋಟ್ಯಂತರ ಜನರು ಕಾತುರದಿಂದ ಕಾಯುತ್ತಿದ್ದ ದಿನ ಇಂದು (ಜನವರಿ 22) ನೆರವೇರಿದ್ದು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ಸಂಪನ್ನಗೊಂಡಿದೆ. 500 ವರ್ಷಗಳ ನಿರಂತರ ಹೋರಾಟ ಹಾಗೂ ಶ್ರಮದ ಫಲವಾಗಿ ದೇವಾಲಯ ಇಂದು ಉದ್ಘಾಟನೆಯಾಗಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದ್ದು, ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಸಿಹಿ ಹಂಚಿ ಸಂಭ್ರಮಿಸಲಾಗಿದೆ.
ಇದರ ನಡುವೆ ರಾಮಮಂದಿರ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸಿದ ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಮರೆಯುವಂತಿಲ್ಲ. ಭವ್ಯವಾದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ ಕಾರ್ಮಿಕರಿಗೆ ಪುಷ್ಪವೃಷ್ಠಿ ಮಾಡುವ ಮೂಲಕ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
#WATCH| Prime Minister Narendra Modi showers flower petals on the workers who were a part of the construction crew at Ram Temple in Ayodhya, Uttar Pradesh.pic.twitter.com/gJp4KSnNp6
ಇದನ್ನೂ ಓದಿ:‘ಜೈ ಶ್ರೀರಾಮ್’​ ಘೋಷಣೆ ಕೇಳುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ರಾಹುಲ್​ ಗಾಂಧಿ; ವಿಡಿಯೋ ವೈರಲ್
ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ನಂತರ ದೇಶವನ್ನುದ್ಧೇಶಿಸಿ ಮಾತನಾಡಿದ ಪ್ರಧಾನಿ ಮೋದಿ ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಭಾಗಿಯಾಗಿದ್ದ ಗಣ್ಯರಿಗೆ ಧನ್ಯಾವದಗಳನ್ನು ತಿಳಿಸಿದ್ದಾರೆ. ಬಳಿಕ ರಾಮಮಂದಿರ ನಿರ್ಮಾಣಕ್ಕಾಗಿ ಹಗಲಿರುಳು ಎನ್ನದೇ ದುಡಿದ ಕಾರ್ಮಿಕರತ್ತ ತೆರಳಿದ ಪ್ರಧಾನಿ ಮೋದಿ ಅವರ ಮೇಲೆ ಪುಷ್ಪವೃಷ್ಠಿ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ರಾಮಮಂದಿರವನ್ನು ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾಗಿದೆ. ಇದರ ಪೂರ್ವ-ಪಶ್ಚಿಮ ಉದ್ದ 380 ಅಡಿ, ಅಗಲ 250 ಅಡಿ ಮತ್ತು ಎತ್ತರ 161 ಅಡಿ. ಇದು 392 ಕಂಬಗಳಿಂದ ಬೆಂಬಲಿತವಾಗಿದೆ ಮತ್ತು 44 ಬಾಗಿಲುಗಳನ್ನು ಹೊಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − three =
Remember me
