ನವದೆಹಲಿ:ಮೇ.14 ರಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ನರೇಂದ್ರ ಮೋದಿ ಇದೀಗ ಮೂರನೇ ಬಾರಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆ ಸ್ಪರ್ಧೆಗೆ ಇಳಿದಿದ್ದು, ಅಧಿಕ ಮತಗಳಿಂದ ಗೆದ್ದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಮುಂದುವರೆಯಲು ಸಜ್ಜಾಗಿದ್ದಾರೆ.
ಇದನ್ನೂ ಓದಿ:ಪರೀಕ್ಷೆಯ ಹಿಂಸೆ, ಕೃಪಾಂಕದ ಎಡವಟ್ಟು: ಮಾಜಿ ಮಂತ್ರಿ ಅಸಹನೆ
ಮೇ 14ರಂದು ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ನಾಳೆ ಕಾಶಿಗೆ ಭೇಟಿ ಕೊಡಲಿರುವ ಪ್ರಧಾನಿ ಮೋದಿ, ಅದ್ದೂರಿ ರೋಡ್​ಶೋನಲ್ಲಿ ಭಾಗವಹಿಸಿ, ಜನರ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಸತತವಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಮೋದಿ, ಎಲೆಕ್ಷನ್​ಗೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.
ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಯ ಸಲುವಾಗಿ ವಾರಣಾಸಿಯ ಮನೆ ಮನೆಗಳಿಗೆ ಆಹ್ವಾನ ಪತ್ರಿಕೆ ಹಂಚಲಾಗಿದೆ. ನಾಮಿನೇಷನ್​ ವೇಳೆ ಇತರೆ ರಾಜ್ಯದ ಮುಖ್ಯಮಂತ್ರಿಗಳು, ಪಕ್ಷದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 5000ಕ್ಕೂ ಅಧಿಕ ಮಹಿಳೆಯರು ಮೋದಿಯವರ ರೋಡ್​ಶೋನಲ್ಲಿ ಹೆಜ್ಜೆ ಹಾಕಲಿದ್ದಾರೆ. ಇದರೊಟ್ಟಿಗೆ ಕಳೆದ 10 ವರ್ಷಗಳಲ್ಲಿ ಕಾಶಿಯಲ್ಲಿನ ಅಭಿವೃದ್ಧಿ ಕೆಲಸಗಳ ಝಲಕ್ ಅನ್ನು ಸಹ ಏರ್ಪಡಿಸಲಾಗಿದೆ,(ಏಜೆನ್ಸೀಸ್).
ಇದಕ್ಕೆಲ್ಲಾ ನನಗೆ ಕ್ಯಾಮರಾ ಬೇಕಿಲ್ಲ… ವಿಚ್ಛೇದನದ ಬಗ್ಗೆ ಕಡೆಗೂ ಮೌನ ಮುರಿದ ನಟಿ ಸಂಜೀದಾ ಶೇಖ್

ಅಂದು ಆರ್​ಸಿಬಿ ಪ್ಲೇಆಫ್​ ಕನಸಿನ ಬಗ್ಗೆ ವಿಲ್​ ಜ್ಯಾಕ್ಸ್​ ನುಡಿದಿದ್ದ ಭವಿಷ್ಯ ಇಂದು ನಿಜವಾಗ್ತಿದೆ! ಏನು ಗೊತ್ತೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − two =
Remember me
