ನವದೆಹಲಿ:ದೇಶದಲ್ಲಿ ಕರೊನಾ ಪರಿಸ್ಥಿತಿಯ ಅವಲೋಕನ ಮಾಡುವ ಸಲುವಾಗಿ ಇಂದು ಪ್ರಧಾನ ನರೇಂದ್ರ ಮೋದಿಯವರು ಕೇಂದ್ರ ಗೃಹ ಸಚಿವ ಅಮಿತ್​ ಷಾ, ಆರೋಗ್ಯ ಸಚಿವ ಡಾ. ಹರ್ಷವರ್ಧನ್​, ನೀತಿ ಆಯೋಗದ ಸದಸ್ಯರು, ಕ್ಯಾಬಿನೆಟ್ ಕಾರ್ಯದರ್ಶಿಗಳು ಹಾಗೂ ಮತ್ತಿತರ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.
ರಾಷ್ಟ್ರರಾಜಧಾನಿಯಲ್ಲಿ ಕರೊನಾ ನಿಯಂತ್ರಣಕ್ಕೆ ಶ್ರಮವಹಿಸುತ್ತಿರುವ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಅಲ್ಲಿನ ಸ್ಥಳೀಯ ಆಡಳಿತಗಳನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲ, ಉಳಿದ ರಾಜ್ಯಗಳಲ್ಲೂ ದೆಹಲಿ ಮಾದರಿಯ ಕ್ರಮಗಳನ್ನೇ ಅನುಸರಿಸಿಕೊಂಡು ಕೊವಿಡ್​-19 ವಿರುದ್ಧ ಹೋರಾಡಬೇಕು ಎಂದಿದ್ದಾರೆ.
ನಾವೆಲ್ಲರೂ ವೈಯಕ್ತಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ಕೊಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತಿನಿಂದ ಇರಬೇಕು. ಸಾಮಾಜಿಕ ಅಂತರ ನಿಯಮಗಳನ್ನು ಪಾಲಿಸಬೇಕು. ಈ ಎಲ್ಲ ಅರಿವು, ಜಾಗೃತಿಯನ್ನು ಜನರಲ್ಲಿ ಮೂಡಿಸಬೇಕು. ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ನರೇಂದ್ರ ಮೋದಿಯವರು ಹೇಳಿದ್ದಾರೆ.
ಭಾರತದಲ್ಲಿ ಸದ್ಯ ಕರೊನಾ ಸೋಂಕಿತರ ಸಂಖ್ಯೆ 8,20,916ಕ್ಕೆ ಏರಿದೆ. 22,123 ಜನರು ಸಾವನ್ನಪ್ಪಿದ್ದಾರೆ. (ಏಜೆನ್ಸೀಸ್​)
‘ನಾನು ಕೊವಿಡ್​-19 ತಪಾಸಣೆ ಮಾಡಿಸಿಕೊಂಡೆ…ನೀವೂ ತಪ್ಪದೆ ಟೆಸ್ಟ್​ಗೆ ಒಳಗಾಗಿ!’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
