ನವದೆಹಲಿ: ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರಿಗೆ ಮುಂದಿನ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ.
ಜಿ20 ಶೃಂಗಸಭೆಯಲ್ಲಿ ಉಭಯ ನಾಯಕರ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ಫಲಪ್ರದವಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ 2024ರ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷರಿಗೆ ಆಹ್ವಾನ ನೀಡಿದ್ದಾರೆ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮಾಹಿತಿ ನೀಡಿದೆ.
ಕೋವಿಡ್‌ ಕಾರಣದಿಂದ 2021 ಮತ್ತು 2022ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನಿಸಿರಲಿಲ್ಲ. 2020ರಲ್ಲಿ ಬ್ರೆಜಿಲ್‌ನ ಆಗಿನ ಅಧ್ಯಕ್ಷ ಜೇರ್ ಬೊಲ್ಸೊನಾರೊ ಅವರನ್ನು ಆಹ್ವಾನಿಸಲಾಗಿತ್ತು. ಇದೀಗ ಅಮೇರಿಕಾ ಅಧ್ಯಕ್ಷ ಬೈಡನ್‌ ಅವರಿಗೆ ಆಹ್ವಾನ ನೀಡಲಾಗಿದೆ.2015ರಲ್ಲಿ ಬರಾಕ್​ ಒಬಾಮಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೊದಲ ಅಮೆರಿಕ ಅಧ್ಯಕ್ಷರಾಗಿದ್ದಾರೆ. ಇದೀಗ ಜೋ ಬೈಡನ್​ 2ನೇ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ.
ಗಣರಾಜ್ಯೋತ್ಸವಕ್ಕೆ ಅತಿಥಿಗಳ ಆಯ್ಕೆ ಹೇಗೆ?ಭಾರತದ ಗಣರಾಜ್ಯೋತ್ಸವಕ್ಕೆ ಅತಿಥಿಗಳನ್ನು ಆಯ್ಕೆ ಮಾಡುವಾಗ, ಆಹ್ವಾನಿಸುವಾಗ ವಿದೇಶಾಂಗ ನೀತಿ ಮತ್ತು ಆರ್ಥಿಕ ಆದ್ಯತೆಗಳ ಸಂಯೋಜನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಜೋ ಬೈಡೆನ್‌ ಅವರಿಗೆ ನೀಡಿದ ಆಹ್ವಾನವು ಭಾರತ-ಯುಎಸ್ ಕಾರ್ಯತಂತ್ರದ ಪಾಲುದಾರಿಕೆಯ ತ್ವರಿತ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ. ಇದು ರಕ್ಷಣಾ ಮತ್ತು ಭದ್ರತಾ ಕ್ಷೇತ್ರದಲ್ಲಿ ನಿಕಟ ಸಹಕಾರದಿಂದ ಹಿಡಿದು G20 ಶೃಂಗಸಭೆಯ ಸಮಯದಲ್ಲಿ ಪ್ರಾರಂಭಿಸಲಾದ ಭಾರತ- ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (IMEC) ಮುಂತಾದ ಯೋಜನೆಗಳಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿರುವುದನ್ನು ಬಿಂಬಿಸುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
