ವಾಷಿಂಗ್ಟನ್​:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಭಾರತಕ್ಕೆ ಆಗಮಿಸಲು ಕ್ಷಣಗಣನೆ ಶುರುವಾಗಿದೆ. ಭಾರತದಲ್ಲಿ ಅವರ ಆಗಮನಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಹಾಗೇ ಭಾರತಕ್ಕೆ ತೆರಳಲು ನಾನು ಕಾತರನಾಗಿದ್ದೇನೆ. ಅಲ್ಲಿರುವ ನನ್ನ ಸ್ನೇಹಿತರನ್ನು ಭೇಟಿ ಮಾಡಲು ಉತ್ಸುಕನಾಗಿದ್ದೇನೆ ಎಂದು ಟ್ರಂಪ್​ ಟ್ವೀಟ್​ ಮಾಡಿದ್ದರು.
ಭಾನುವಾರ ವೈಟ್​ಹೌಸ್​ ಎದುರು ಅಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಭಾರತಕ್ಕೆ ಹೋಗಿ, ಅಲ್ಲಿನ ಜನರೊಂದಿಗೆ ಮಾತನಾಡಲು, ಅವರನ್ನು ನೋಡಲು ಕಾಯುತ್ತಿದ್ದೇನೆ. ಇದೊಂದು ಸುದೀರ್ಘ ಪ್ರವಾಸ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ ನನ್ನ ಆತ್ಮೀಯ ಸ್ನೇಹಿತ. ಅವರೊಟ್ಟಿಗೆ ನಾನು ತುಂಬ ಆತ್ಮೀಯತೆಯಿಂದ ಬೆರೆಯುತ್ತೇನೆ ಎಂದು ಹೇಳಿದರು.
ಯುಎಸ್​ ಅಧ್ಯಕ್ಷ ಡೊನಾಲ್ಡ್ ಟ್ರಂಪ್​, ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರು ಇಂದು ಬೆಳಗ್ಗೆ ಸುಮಾರು 11 ಗಂಟೆಯಷ್ಟೊತ್ತಿಗೆ ಭಾರತಕ್ಕೆ ಆಗಮಿಸಲಿದ್ದಾರೆ. ಟ್ರಂಪ್​ ಪುತ್ರಿ ಇವಾಂಕಾ ಟ್ರಂಪ್​ ಮತ್ತು ಅವರ ಪತಿ ಕೂಡ ಬರಲಿದ್ದಾರೆ. ಇವರೊಂದಿಗೆ ಉನ್ನತ ಮಟ್ಟದ ಆಯೋಗವೂ ಇರಲಿದೆ. ಅವರೆಲ್ಲ ಅಹಮದಾಬಾದ್​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆಯೇ ಟ್ವೀಟ್ ಮೂಲಕ ಟ್ರಂಪ್​ ಅವರಿಗೆ ಸ್ವಾಗತ ಕೋರಿದ್ದರು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − twelve =
Remember me
