ನವದೆಹಲಿ:ಇಟಲಿಯ ಅಪುಲಿಯಾ ಪ್ರದೇಶದ ಬೊರ್ಗೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ನಡೆಯಲಿರುವ ಜೂನ್ 14 (ನಾಳೆ) ಆರಂಭಗೊಳ್ಳುವ ಜಿ-7 ಔಟ್ರೀಚ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಟಲಿನತ್ತ ಪ್ರಯಾಣ ಬೆಳೆಸಿದ್ದಾರೆ.
ಇದನ್ನೂ ಓದಿ:ಸಿಕ್ಕಿಂ: ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಸಿಎಂ ಪತ್ನಿ ಶಾಸಕ ಸ್ಥಾನಕ್ಕೆ ರಾಜೀನಾಮೆ!
ಜಿ-7 ಔಟ್ರೀಚ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ಇಂದು (ಜೂ.13) ರಂದು ಇಟಲಿಗೆ ಪ್ರಯಾಣ ಬೆಳೆಸಿದರು. ಇದು ಈ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರ ಮೊದಲ ಅಂತಾರಾಷ್ಟ್ರೀಯ ಭೇಟಿ ಅಥವಾ ಪ್ರಯಾಣವಾಗಿದೆ.
#WATCH| Delhi: Prime Minister Narendra Modi departs for Italy. At the invitation of Italian PM Giorgia Meloni, PM Modi is travelling to Apulia, Italy to participate in G7 Outreach Summit on 14th June.
The two leaders will have a bilateral meeting on the sidelines of the…pic.twitter.com/JnpuJeLSuO
— ANI (@ANI)June 13, 2024

ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಜೂನ್ 14 ರಂದು ಜಿ7 ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಅಪುಲಿಯಾಗೆ ಪ್ರಯಾಣ ಬೆಳೆಸಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.ಈ ವರ್ಷ ಏಳು ಮುಂದುವರಿದ ಆರ್ಥಿಕತೆಗಳ ಗುಂಪಿನ ವಾರ್ಷಿಕ ಶೃಂಗಸಭೆಯು ಇಟಲಿಯ ಅಪುಲಿಯಾ ಪ್ರದೇಶದ ಬೊರ್ಗೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ನಡೆಯಲಿದೆ.
ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷವು G7 ಶೃಂಗಸಭೆಯಲ್ಲಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಯಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾದ ಆಕ್ರಮಣದ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ ಇಂದು (ಜೂನ್ 13) ರಂದು ಇಟಲಿಗೆ ತೆರಳಲಿದ್ದಾರೆ ಮತ್ತು ಜೂನ್ 14 ರಂದು ಸಂಜೆಯ ವೇಳೆಗೆ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಅವರನ್ನು ಒಳಗೊಂಡಿರುವ ಉನ್ನತ ಮಟ್ಟದ ನಿಯೋಗವು ಪ್ರಧಾನಿಯವರೊಂದಿಗೆ ಇರಲಿದೆ.
ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 3 =
Remember me
