ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಆಗಸ್ಟ್ 23ರಂದು ಯುದ್ಧಪೀಡಿತ ಯೂಕ್ರೇನ್​ಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.
ಪ್ರಧಾನಿ ಮೋದಿ ಭೇಟಿ ನೀಡಿದ್ದಲ್ಲಿ, ಯೂಕ್ರೇನ್​ ಮೇಲೆ ರಷ್ಯಾ ಆಕ್ರಮಣದ ನಂತರದ ಮೊದಲನೇ ಭೇಟಿ ಇದಾಗಲಿದೆ. ಇತ್ತೀಚೆಗಷ್ಟೇ ಮೋದಿ ಅವರು ರಷ್ಯಾಗೆ ಭೇಟಿ ನೀಡಿ, ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಅವರ ಜತೆ ಮಾತುಕತೆ ನಡೆಸಿದ್ದರು. ಇದೀಗ ಯೂಕ್ರೇನ್​ ಭೇಟಿ ತುಂಬಾ ಮಹತ್ವ ಪಡೆದುಕೊಂಡಿದೆ.
ಸುಮಾರು ಒಂದು ತಿಂಗಳ ಹಿಂದೆ ಪ್ರಧಾನಿ ಮೋದಿ ಅವರು ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದರು. ಇದೀಗ ಯೂಕ್ರೇನ್​ ಪ್ರವಾಸದ ಮೂಲಕ ಯುದ್ಧಪೀಡಿತ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಮೊದಲ ಭೇಟಿ ನೀಡಲಿದ್ದು, ಉಭಯ ನಾಯಕರ ನಡುವೆ ಏನೆಲ್ಲಾ ಮಾತುಕತೆಗಳು ನಡೆಯಲಿವೆ ಎಂಬುದನ್ನು ಕಾದು ನೋಡಬೇಕಿದೆ.
ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರು ರಷ್ಯಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಸಲ್ಲಿಸಿದ ಸೇವೆಗಾಗಿ ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್​ ಆಫ್​ ಸೇಂಟ್​ ಆ್ಯಂಡ್ರೀವ್​ ದಿ ಅಪೊಸ್ಟ್ಲ್​ ನೀಡಿ ಗೌರವಿಸಲಾಗಿತ್ತು.(ಏಜೆನ್ಸೀಸ್​)
ಪ್ರತಿಷ್ಠಿತ ಯುಎಸ್​ ಸ್ಕಾಲರ್​ಶಿಪ್​ಗೆ ಆಯ್ಕೆಯಾದ ಅಗಸನ ಮಗಳು! ಬಡತನದಲ್ಲಿ ಅರಳಿದ ಪ್ರತಿಭೆ ದೀಪಾಲಿ

ಕೆಲಸ ಹುಡುಕುತ್ತಿರುವವರಿಗೆ ಬಂಪರ್ ಆಫರ್: ಐಟಿ ಕಂಪನಿಗಳಿಂದ 88,000 ನೇಮಕಾತಿ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 17 =
Remember me
