ನವದೆಹಲಿ:ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಜತೆ ಶನಿವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಕ್ಷಣೆ ಮತ್ತು ಭದ್ರತೆ ಸೇರಿದಂತೆ ಉಭಯ ದೇಶಗಳ ನಡುವಿನ ಸಂಬಂಧದ ಬಗ್ಗೆ ಚರ್ಚೆ ಮಾಡಿದರು.
ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರ ಹಿರಿಯ ಸಹೋದರ ಆಗಿರುವ ಮಹಿಂದಾ ರಾಜಪಕ್ಸೆ, ಐದು ದಿನಗಳ ಭಾರತ ಪ್ರವಾಸಕ್ಕಾಗಿ ಶುಕ್ರವಾರ ನವದೆಹಲಿಗೆ ಬಂದಿಳಿದರು. ಕಳೆದ ನವೆಂಬರ್​ನಲ್ಲಿ ನಡೆದ ಚುನಾವಣೆಯ ಬಳಿಕ ಮಹಿಂದಾ ರಾಜಪಕ್ಸೆ ಅವರನ್ನು ಲಂಕಾ ಪ್ರಧಾನಿಯಾಗಿ ನೇಮಕ ಮಾಡಿದ ಬಳಿಕ ಮೊದಲ ಭಾರತ ಭೇಟಿ ಇದಾಗಿದೆ.
ವ್ಯಾಪಾರ, ಬಂಡವಾಳ ಹೂಡಿಕೆ, ರಕ್ಷಣಾ ಮತ್ತು ಭದ್ರತೆಗೆ ಸಂಬಂಧಿಸಿದ ಮಹತ್ವದ ವಿಚಾರಗಳನ್ನು ಉಭಯ ದೇಶದ ಪ್ರಧಾನಿಗಳಿಂದ ಚರ್ಚೆಯಾಗಲಿದೆ ಎಂದು ತಿಳಿದುಬಂದಿದೆ. ಅಧಿಕೃತ ಮಾತುಕತೆಗಳು ಮುಗಿದ ಬಳಿಕ ಮಹಿಂದಾ ರಾಜಪಕ್ಸೆ ಅವರು ವಾರಾಣಸಿ, ಸಾರಾನಾಥ್​, ಬುದ್ಧ ಗಯಾ ಮತ್ತು ತಿರುಪತಿಗೆ ಭೇಟಿ ನೀಡಲಿದ್ದಾರೆ.
ಇಂದು ಬೆಳಗ್ಗೆ ಮಹಿಂದಾ ರಾಜಪಕ್ಸೆ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಆತ್ಮೀಯ ಸ್ವಾಗತವನ್ನು ಮಾಡಲಾಯಿತು. ಅಂದಹಾಗೆ ಮಹಿಂದಾ ರಾಜಪಕ್ಸೆ ಅವರು 2005ರಿಂದ 2015ರವರೆಗೆ ಲಂಕಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಈ ಮೂಲಕ ದಕ್ಷಿಣ ಏಷ್ಯಾದಲ್ಲೇ ದೀರ್ಘಾವಧಿವರೆಗೆ ಸೇವೆ ಸಲ್ಲಿಸಿದ ನಾಯಕನೆಂಬ ಹೆಸರನ್ನು ಹೊಂದಿದ್ದಾರೆ. ಅಲ್ಲದೆ, 2018ರಲ್ಲಿ ಅಲ್ಪಾವಧಿಯವರೆಗೂ ಪ್ರಧಾನ ಮಂತ್ರಿಯಾಗಿದ್ದರು.
ಅಧ್ಯಕ್ಷ ಗೋತಬಯ ಅವರು ಕಳೆದ ನವೆಂಬರ್​ನಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆಯು ಪ್ರಧಾನಿ ಮೋದಿಯವರೊಂದಿಗೆ ದ್ವಿಪಕ್ಷಿಯ ಮಾತುಕತೆ ನಡೆದಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
