ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 76ನೇ ಜಯಂತಿ ಪ್ರಯುಕ್ತ ಅವರಿಗೆ ಗೌರವ ಸಮರ್ಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ರಾಜೀವ್ ಗಾಂಧಿಯವರ ಜನ್ಮದಿನದ ನಿಮಿತ್ತ ಗೌರವ ಸಲ್ಲಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಖಾಸಗಿಯಿಂದ ಕರೊನಾ ಸುಲಿಗೆ: ಸರ್ಕಾರದ ಆದೇಶಕ್ಕೆ ಕಿಮ್ಮತ್ತು ನೀಡದ ಖಾಸಗಿ ಆಸ್ಪತ್ರೆಗಳು
ರಾಜೀವ್ ಗಾಂಧಿ ಅವರು 1944ರ ಆಗಸ್ಟ್ 20ರಂದು ಜನಿಸಿದರು. ಅವರು 1984ರ ಅಕ್ಟೋಬರ್​ ತಿಂಗಳಲ್ಲಿ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆಗ ಅವರು ದೇಶದ ಅತ್ಯಂತ ಯುವ ಪ್ರಧಾನಿ ಎಂಬ ಕೀರ್ತಿಗೆ ಭಾಜನರಾಗಿದ್ದರು. ಅವರು 1989ರ ಡಿಸೆಂಬರ್ 2ರ ತನಕ ಪ್ರಧಾನಿಯಾಗಿದ್ದರು. 1991 ಮೇ ತಿಂಗಳಲ್ಲಿ ತಮಿಳುನಾಡಿನ ಶ್ರೀಪೆರುಂಬದೂರ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ವೇಳೆ ಎಲ್​ಟಿಟಿಇ ಉಗ್ರರ ಆತ್ಮಹತ್ಯಾ ದಾಳಿಗೆ ಬಲಿಯಾದರು. ಕಾಂಗ್ರೆಸ್ ಪಕ್ಷ ರಾಜೀವ್ ಅವರ ಜನ್ಮದಿನವನ್ನು ಸದ್ಭಾವನಾ ದಿನ ಎಂದು ಆಚರಿಸುತ್ತಿದೆ. (ಏಜೆನ್ಸೀಸ್)
VIDEO: ಹತ್ತು ಮಕ್ಕಳ ತಾಯಿಯಾಗು, ಹನ್ನೊಂದನೆಯ ಮಗು ನಿನ್ನ ಪತಿಯಾಗಲಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + 9 =
Remember me
