ನವದೆಹಲಿ:ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಅದಕ್ಕೂ ಮುನ್ನ ಮೋದಿ ಅವರು ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ದೆಹಲಿಯ ರಾಜ್​ಘಾಟ್​ಗೆ ತೆರಳಿದ ಪ್ರಧಾನಿ ಮೋದಿ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿ ಕೆಂಪುಕೋಟೆಯತ್ತ ಹೊರಟರು. ಇನ್ನು ಕೆಲವೇ ಕ್ಷಣಗಳಲ್ಲಿ ಮೋದಿ ಧ್ವಜಾರೋಹಣ ಮಾಡಲಿದ್ದಾರೆ.
ನವದೆಹಲಿ: ದೇಶಾದ್ಯಂತ ಸ್ವಾತಂ ತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಮನೆ ಮಾಡಿರುವಂತೆಯೇ, ಉಗ್ರಭೀತಿಯೂ ಆವರಿಸಿದೆ. ಆ.15ರ ದಿನವನ್ನೇ ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿದೆ ಎಂದು ಕೇಂದ್ರೀಯ ಗುಪ್ತಚರ ಪಡೆಯ ವರದಿ ಎಚ್ಚರಿಸಿದ್ದು, ಕೆಲ ಷಡ್ಯಂತ್ರಗಳು ಬಯಲಾಗಿವೆ. ದೆಹಲಿಯಲ್ಲಿ 2 ದಿನಗಳ ಹಿಂದಷ್ಟೇ ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಬೆನ್ನಲ್ಲೇ, ಭಾನುವಾರ ಪಂಜಾಬ್​ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕ್ ಐಎಸ್​ಐನೊಂದಿಗೆ ನಂಟು ಹೊಂದಿರುವುದು ಬಯಲಾಗಿದೆ. ಈ ಕಾರಣಕ್ಕಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ದೆಹಲಿ ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಭದ್ರತೆ ನೀಡಲಾಗಿದೆ.
Delhi | PM Modi pays tribute to Mahatma Gandhi at Rajghat on the 76th Independence Daypic.twitter.com/1UFpkoVoAR
— ANI (@ANI)August 15, 2022

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
