ವಾರಣಾಸಿ:18ನೇ ಸಾರ್ವತ್ರಕ ಚುನಾವಣೆಯ ಫಲಿತಾಂಶ ಇಂದು (ಜೂನ್​ 04) ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಮ್ಯಾಜಿಕ್​ ನಂಬರ್​ನತ್ತ ದಾಪುಗಾಲಿಟ್ಟಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ 72,133 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ.
ಆರಂಭಿಕ ಹಂತದ ಮತೆಎಣಿಕೆಯಲ್ಲಿ ಅಲ್ಪ ಹಿನ್ನಡೆಯನ್ನು ಸಾಧಿಸಿದ ಪ್ರಧಾನಿ ಮೋದಿ ಆ ನಂತರ ಭರ್ಜರಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
2019 ರ ಲೋಕಸಭೆ ಚುನಾವಣೆಯಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯದ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದುಕೊಂಡಿತು, ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷವು ನಂತರ ಮಿತ್ರಪಕ್ಷಗಳು ಕ್ರಮವಾಗಿ 10 ಮತ್ತು ಐದು ಸ್ಥಾನಗಳನ್ನು ಗೆದ್ದವು. ಈ ಬಾರಿ, ಉತ್ತರಪ್ರದೇಶದಲ್ಲಿ ಕಠಿಣ ಪೈಪೋಟಿ ಎದುರಾಗಿದ್ದು, ಸಂಜೆ ವೇಳೆಗೆ ಅಂತಿಮ ಚಿತ್ರಣ ಹೊರಬೀಳಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + fifteen =
Remember me
