ನವದೆಹಲಿ:ದೇಶದಲ್ಲಿ ಮಹಾಮಾರಿ ಕರೊನಾ ವೈರಸ್​ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚು ಕರೊನಾ ಪ್ರಕರಣಳು ವರದಿಯಾಗಿರುವ 7 ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್​-19 ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದರು.
ಬುಧವಾರ ಸಂಜೆ ನಡೆದ ವರ್ಚುವಲ್​ ಸಭೆಯಲ್ಲಿ ಏಳು ರಾಜ್ಯದ ಮುಖ್ಯಮಂತ್ರಿಗಳಲ್ಲದೆ, ಆರೋಗ್ಯ ಮಂತ್ರಿಗಳು ಸಹ ಭಾಗವಹಿಸಿದರು. ಮಹಾರಾಷ್ಟ್ರ, ಆಂಧ್ರ ಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ದೆಹಲಿ ಮತ್ತು ಪಂಜಾಬ್​ ರಾಜ್ಯದ ಪ್ರತಿನಿಧಿಗಳು ಪ್ರಧಾನಿಯೊಂದಿಗೆ ಚರ್ಚಿಸಿದರು. ದೇಶದ ಒಟ್ಟು ಕರೊನಾ ಪ್ರಕರಣದ ಶೇ. 63 ರಷ್ಟು ಪ್ರಕರಣಗಳು ಮತ್ತು ಒಟ್ಟಾರೆ ಸಾವುಗಳಲ್ಲಿ ಶೇ. 77 ರಷ್ಟು ಪ್ರಕರಣಗಳು ಈ ಏಳು ರಾಜ್ಯಗಳಿಂದ ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಡ್ರಗ್ಸ್​ ಕೇಸ್​; ದೀಪಿಕಾ ಪಡುಕೋಣೆ ಸೇರಿ ನಾಲ್ವರಿಗೆ ಎನ್​ಸಿಬಿ ಸಮನ್ಸ್​
ಇತರ ಐದು ರಾಜ್ಯಗಳ ಜತೆಗೆ ಪಂಜಾಬ್ ಮತ್ತು ದೆಹಲಿಯಲ್ಲಿ ಇತ್ತೀಚೆಗೆ ಕರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮಹಾರಾಷ್ಟ್ರ, ಪಂಜಾಬ್​ ಮತ್ತು ದೆಹಲಿಯಲ್ಲಿ ಶೇ. 2ಕ್ಕಿಂತಲೂ ಹೆಚ್ಚಿನ ಮರಣ ಪ್ರಮಾಣದೊಂದಿಗೆ ಹೆಚ್ಚು ಸಾವುಗಳಾಗುತ್ತಿವೆ ಎಂದು ವರದಿಯಾಗಿದೆ.
ಹೀಗಾಗಿ ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಯೋಗ ಮತ್ತು ಸಮನ್ವಯದೊಂದಿಗೆ ಕೋವಿಡ್​ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ.(ಏಜೆನ್ಸೀಸ್​)
ಮಾಸ್ಕ್​ನಿಂದ ನಂಬರ್​ ಪ್ಲೇಟ್ ಮುಚ್ಚಿ ಓಡಾಡುತ್ತಿದ್ದ ಬೈಕ್​ ಸವಾರನಿಗೆ ಕಾದಿತ್ತು ಬಿಗ್​ ಶಾಕ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
