ಬೆಂಗಳೂರು:ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾದ ನಂತರ ಪ್ರಧಾನಿ ನರೇಂದ್ರ ಮೋದಿ ಮೇ 5 ರಂದು ರಾಜ್ಯಕ್ಕೆ ಮೋದಿ ಮೂರನೇ ಬಾರಿ‌ ಚುನಾವಣಾ ಪ್ರಚಾರದ ಅಖಾಡ ಪ್ರವೇಶಿಸಲಿದ್ದಾರೆ.
ಮೇ 5 ರಂದು ಬಳ್ಳಾರಿ ಮತ್ತು ತುಮಕೂರುಗಳಲ್ಲಿ ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಮೋದಿ ಭಾಗಿಯಾದ ನಂತರ ಅಂದು ರಾತ್ರಿ‌ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದು ಮೇ 06ರಂದು ಬೆಂಗಳೂರಿನಲ್ಲಿ ಐತಿಹಾಸಿಕ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಇದನ್ನೂ ಓದಿ:ಮೋದಿ ಕಾರ್ಯಕ್ರಮ ಯಶಸ್ವಿಗಾಗಿ 108 ತೆಂಗಿನಕಾಯಿ ಗಣಹೋಮ ಪೂಜೆ ಮಾಡಿದ ಬಿಜೆಪಿ ಅಭ್ಯರ್ಥಿ
ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಿ ವಿ ರಾಮನ್ ನಗರ ಕ್ಷೇತ್ರದಿಂದ‌ ಬ್ರಿಗೇಡ್ ರಸ್ತೆವರೆಗೆ ಸುಮಾರು 8 ಕಿ.ಮೀ ಉದ್ದದ ಮೊದಲ ಮೆಗಾ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8.30 ರ ತನಕ ಎರಡನೇ ಮೆಗಾ ರೋಡ್ ಶೋ ಕೋಣನಕುಂಟೆ ಬಳಿಯ ಬ್ರಿಗೇಡ್ ಮಿಲೆನಿಯಂನಿಂದ ಸ್ಯಾಂಕಿ ಕೆರೆ ವರೆಗೆ 29.4 ಕಿ.ಮೀ ವರೆಗೆ ನಡೆಯಲಿದೆ. ಎರಡನೇ ದಿನವೂ ಬೆಂಗಳೂರಿನಲ್ಲೇ ಮೋದಿ ವಾಸ್ತವ್ಯ ಹೂಡುವರು.

ಮೇ 07 ರಂದು ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮೀಣ ಹಾಗೂ ನಂಜನಗೂಡು ಕ್ಷೇತ್ರಗಳಲ್ಲಿ ಮೋದಿ ಪ್ರವಾಸ ನಡೆಸಲಿದ್ದು ಈ ನಾಲ್ಕೂ ಕ್ಷೇತ್ರಗಳಲ್ಲಿ ಸಾರ್ವಜನಿಕ ಬೃಹತ್ ಸಭೆಗಳಲ್ಲಿ ಮೋದಿ ಭಾಷಣ ಮಾಡಲಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ: ಹೊಸಪೇಟೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
ಬಳಿಕ ಅಂದು ಸಂಜೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದು, ಅಂದು ರಾತ್ರಿ 7ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಮೋದಿ ದೆಹಲಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eleven =
Remember me
