ಪುಣೆ:ರಾಜ್ಯದ ಅಭಿವೃದ್ಧಿಗೆ ತನ್ನ ಬಳಿ ಹಣವಿಲ್ಲ ಎಂದು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಮತ್ತೊಂದೆಡೆ, ರಾಜಸ್ಥಾನವು ದೊಡ್ಡ ಸಾಲದಲ್ಲಿದ್ದು ಅಲ್ಲಿನ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಕಾಂಗ್ರೆಸ್​​ನ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ:ಮೊಸಳೆ ಹತ್ಯೆಗೈದು ಮಾಂಸ ಮಾರಾಟ..!ಪುಣೆಯಲ್ಲಿ ಎರಡು ಹೊಸ ಪುಣೆ ಮೆಟ್ರೋ ರೈಲುಗಳಿಗೆ ಚಾಲನೆ ನೀಡಿದ ನಂತರ ಮತ್ತು 15,000 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ನಂತರ ಪ್ರಧಾನಿ ಮಾತನಾಡಿದ್ದು, ಬೆಂಗಳೂರು ಜಾಗತಿಕ ಹೂಡಿಕೆದಾರರ ಕೇಂದ್ರ ಮತ್ತು ಐಟಿ ಕೇಂದ್ರವಾಗಿದೆ, ಆದರೆ ರಾಜ್ಯ ಸರ್ಕಾರದ ಘೋಷಣೆಯ ದುಷ್ಪರಿಣಾಮಗಳು, ಕಡಿಮೆ ಸಮಯದಲ್ಲೇ ಅಲ್ಲಿ ಕಂಡು ಬರುತ್ತಿವೆ ಎಂದು ಹೇಳಿದ್ದಾರೆ.ಯಾವುದೇ ಪಕ್ಷವು ತನ್ನ ಸ್ವಾರ್ಥಕ್ಕಾಗಿ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದರೆ ಅದರ ಭಾರವನ್ನು ಜನರೇ ಹೊರುತ್ತಾರೆ. ಒಂದು ಕಡೆ ಪುಣೆಯಲ್ಲಿ ಆಗುತ್ತಿರುವ ಅಭಿವೃದ್ಧಿಯನ್ನು ನಾವು ನೋಡಬಹುದು ಮತ್ತು ಇನ್ನೊಂದು ಕಡೆ ಬೆಂಗಳೂರಿನಲ್ಲಿ ಏನಾಗುತ್ತಿದೆ ಎಂಬುದನ್ನು ನಾವು ನೋಡಬಹುದಾಗಿದೆ. ಅಲ್ಲದೇ, ರಾಜಸ್ಥಾನದಲ್ಲಿ ಅದೇ ಪರಿಸ್ಥಿತಿಯನ್ನು ಕಾಣಬಹುದಾಗಿದ್ದು, ಅಲ್ಲಿಯೂ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ ಎಂದು ಪ್ರಧಾನಿ ಹೇಳಿದ್ದಾರೆ.
ಈ ಹಿಂದೆ, ಕಾಂಗ್ರೆಸ್ ಪಕ್ಷವು ನೀಡಿರುವ ಐದು ಚುನಾವಣಾ ಪೂರ್ವ ಭರವಸೆಗಳನ್ನು ಜಾರಿಗೊಳಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ರಾಜ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುದಾನ ಮೀಸಲಿಡಲು ಅವಕಾಶವಿಲ್ಲ ಎಂದು ರಾಜ್ಯ ಕಾಂಗ್ರೆಸ್​​ ನಾಯಕರು ಹೇಳಿದ್ದರು.(ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two + eighteen =
Remember me
