ನವದೆಹಲಿ:ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೆ ನರೇಂದ್ರ ಮೋದಿ ಅವರು ದೇಶದ ರೈತರಿಗೆ ಮೊದಲ ಕೊಡುಗೆ ನೀಡಿದ್ದಾರೆ. ರೈತರ ಹಿತದೃಷ್ಟಿಯಿಂದ ಮೊದಲ ನಿರ್ಧಾರ ಕೈಗೊಂಡು ಪಿಎಂ ಕಿಸಾನ್ ನಿಧಿಯ 17ನೇ ಕಂತು ಬಿಡುಗಡೆ ಮಾಡುವ ಅಧಿಕೃತ ಕಡತಕ್ಕೆ ಪಿಎಂ ಮೋದಿ ಸಹಿ ಹಾಕಿದರು. ಪ್ರಧಾನಮಂತ್ರಿಯವರ ಕಚೇರಿಯಲ್ಲಿ ಸಹಿ ಮಾಡಲಾದ ಮೊದಲ ಕಡತವು ರೈತರನ್ನು ಓಲೈಸುವ ಗುರಿಯನ್ನು ಹೊಂದಿದೆ.
ಇದನ್ನು ಓದಿ:ಮೋದಿ ನಾಯಕತ್ವದಲ್ಲಿ ಭಾರತ ಅಭೂತಪೂರ್ವ ಅಭಿವೃದ್ಧಿ ಕಂಡಿದೆ : ಭೂತಾನ್​​ ಪ್ರಧಾನಿ ತೊಬ್ಗೇ
ಮೋದಿ ಅವರು ಬಿಡುಗಡೆ ಮಾಡಿರುವ ಕಿಸಾನ್ ನಿಧಿಯ 17ನೇ ಕಂತಿನಿಂದ 9.3 ಕೋಟಿ ರೈತರಿಗೆ ಅನುಕೂಲವಾಗಲಿದೆ. ಈ ಕಂತಿನಡಿ ಸುಮಾರು 20,000 ಕೋಟಿ ರೂಪಾಯಿಗಳನ್ನು ನೇರವಾಗಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗುವುದು. ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಿದ ನಂತರ ಮೋದಿ ಅವರು ನಮ್ಮ ಸರ್ಕಾರ ರೈತರ ಕಲ್ಯಾಣಕ್ಕಾಗಿ ಸಂಪೂರ್ಣವಾಗಿ ಸಮರ್ಪಿತವಾಗಿದೆ ಎಂದು ಹೇಳಿದರು. ಹಾಗೂ ಮುಂದಿನ ದಿನಗಳಲ್ಲಿ ರೈತರು ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.

ಪಿಎಂ ಕಿಸಾನ್ ನಿಧಿ ಯೋಜನೆಯನ್ನು 2019ರಲ್ಲಿ ಪ್ರಾರಂಭಿಸಲಾಯಿತು. ಯೋಜನೆಯ 16ನೇ ಕಂತನ್ನು ಫೆಬ್ರವರಿ 28ರಂದು ಬಿಡುಗಡೆ ಮಾಡಲಾಗಿದೆ. ಪಿಎಂ ಕಿಸಾನ್ ನಿಧಿ ಅಡಿಯಲ್ಲಿ ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷದಲ್ಲಿ ಮೂರು ಕಂತುಗಳಲ್ಲಿ 2 ಸಾವಿರ ರೂಪಾಯಿಯಂತೆ ಒಂದು ವರ್ಷದಲ್ಲಿ ಒಟ್ಟು 6000 ರೂಪಾಯಿ ರೈತರ ಖಾತೆಗೆ ಜಮೆಯಾಗಲಿದೆ. (ಏಜೆನ್ಸೀಸ್​​)
ಅರಿಶಿನ, ಮೆಹೆಂದಿ ಶಾಸ್ತ್ರದ ಸಂಭ್ರಮದಲ್ಲಿ ಆ್ಯಕ್ಷನ್​​ ಕಿಂಗ್​ ಅರ್ಜುನ್​​ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × 1 =
Remember me
