ನವದೆಹಲಿ:ಇಡೀ ದೇಶವನ್ನೇ ಸಂಕಷ್ಟಕ್ಕೆ ದೂಡಿರುವ ಮಹಾಮಾರಿ ಕರೊನಾ ವೈರಸ್ ಕುರಿತ ಕೆಲವು ಮಹತ್ವದ ವಿಚಾರಗಳನ್ನು ಹಂಚಿಕೊಳ್ಳಲು ಇಂದು ರಾತ್ರಿ 8 ಗಂಟೆಗೆ ಮತ್ತೊಮ್ಮೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಕೋವಿಡ್​-19 ಭೀತಿ ಕುರಿತ ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದೇನೆ ಎಂದಿದ್ದಾರೆ.
वैश्विक महामारी कोरोना वायरस के बढ़ते प्रकोप के संबंध में कुछ महत्वपूर्ण बातें देशवासियों के साथ साझा करूंगा। आज, 24 मार्च रात 8 बजे देश को संबोधित करूंगा।
Will address the nation at 8 PM today, 24th March 2020, on vital aspects relating to the menace of COVID-19.
— Narendra Modi (@narendramodi)March 24, 2020

ನಿನ್ನೆಯಷ್ಟೇ ಟ್ವೀಟ್​ ಮಾಡಿದ್ದ ಪ್ರಧಾನಿ ಮೋದಿ, ಲಾಕ್​ಡೌನ್ ಅನ್ನು ಅನೇಕ ಜನರು ಗಂಭೀರವಾಗಿ ಪರಿಗಣಿಸಿಲ್ಲ. ದಯವಿಟ್ಟು ನಿಮ್ಮನ್ನು ನೀವು ಕಾಪಾಡಿಕೊಂಡು, ನಿಮ್ಮ ಕುಟುಂಬವನ್ನು ಉಳಿಸಿಕೊಳ್ಳಿ. ಇದಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಗಂಭೀರವಾಗಿ ಪಾಲಿಸಿ. ಜನರು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿರುವುದನ್ನು ರಾಜ್ಯ ಸರ್ಕಾರಗಳು ಖಚಿತಪಡಿಸಬೇಕು ಎಂದು ಪ್ರಧಾನಿ ವಿನಂತಿ ಮಾಡಿದ್ದರು.
ದೇಶದಲ್ಲಿ ಈವರೆಗೆ 470ಕ್ಕೂ ಅಧಿಕ ಮಂದಿಗೆ ಕರೊನಾ ಸೋಂಕು ತಗುಲಿದ್ದು, ಓರ್ವ ಇಟಲಿ ಪ್ರಜೆ ಸೇರಿ ಒಟ್ಟು 10 ಮಂದಿ ಬಲಿಯಾಗಿದ್ದಾರೆ.(ಏಜೆನ್ಸೀಸ್​)
ದೇಶದ ಜನತೆ ಮೇಲೆ ಪ್ರಧಾನಿ ಮೋದಿ ಅಸಮಾಧಾನ: ದಯವಿಟ್ಟು ಗಂಭೀರವಾಗಿ ಪರಿಗಣಿಸಿ ಎಂದು ಮನವಿ

2ನೇ ಪರೀಕ್ಷೆಯಲ್ಲೂ ಕನ್ನಿಕಾಗೆ ಕರೊನಾ ಕಂಟಕ: ವರದಿ ತಪ್ಪು ಎಂದಿದ್ದ ಪಾಲಕರಿಗೆ ವಿಷಯ ಕೇಳಿ ಶಾಕ್​

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four + 9 =
Remember me
