ನವದೆಹಲಿ:ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಜನರಿಗೆ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 30ರಂದು ವಿತರಿಸಲಿದ್ದಾರೆ.
ವೀಡಿಯೊ ಕಾನ್ಫರೆನ್ಸ್ ಮೂಲಕ ಈ ವಿತರಣೆ ಸಮಾರಂಭ ನಡೆಯಲಿದೆ ಎಂದು ಅವರ ಪ್ರಧಾನಿ ಕಚೇರಿ ಮಂಗಳವಾರ ತಿಳಿಸಿದೆ.
ರೋಜ್‌ಗಾರ್ (ಉದ್ಯೋಗ) ಮೇಳದ ಅಂಗವಾಗಿ ದೇಶಾದ್ಯಂತ 37 ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಉಪಕ್ರಮವನ್ನು ಬೆಂಬಲಿಸುವ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ನೇಮಕಾತಿ ನಡೆಯುತ್ತಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.
ಕಂದಾಯ, ಗೃಹ ವ್ಯವಹಾರ, ಉನ್ನತ ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಹಣಕಾಸು ಸೇವೆ, ರಕ್ಷಣೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕಾರ್ಮಿಕ ಮತ್ತು ಉದ್ಯೋಗ ಇತ್ಯಾದಿ ಇಲಾಖೆಗಳಲ್ಲಿ ಈ ನೇಮಕಾತಿ ನಡೆಯುತ್ತಿದೆ.
ರೋಜ್‌ಗಾರ್ ಮೇಳವು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನ ಮಂತ್ರಿಯವರ ಬದ್ಧತೆಯ ಈಡೇರಿಕೆಗೆ ಒಂದು ಹೆಜ್ಜೆಯಾಗಿದೆ. ಇದು ಮತ್ತಷ್ಟು ಉದ್ಯೋಗ ಸೃಷ್ಟಿಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಯುವಜನರಿಗೆ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೊಸದಾಗಿ ನೇಮಕಗೊಂಡವರು ಹೊಸ ಆಲೋಚನೆಗಳು ಮತ್ತು ಸಾಮರ್ಥ್ಯಗಳೊಂದಿಗೆ ರಾಷ್ಟ್ರದ ಕೈಗಾರಿಕೆ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಬಲಪಡಿಸಲು ಕೊಡುಗೆ ನೀಡುತ್ತಾರೆ, ಅಭಿವೃದ್ಧಿ ಹೊಂದಿದ ಭಾರತದ ಬಗ್ಗೆ ಮೋದಿಯವರ ದೃಷ್ಟಿಯನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತಾರೆ ಎಂದೂ ಪ್ರಕಟಣೆ ಹೇಳಿದೆ.
ಹೊಸದಾಗಿ ನೇಮಕಗೊಂಡವರು ಐಜಿಒಟಿ (ಇಂಟಿಗ್ರೇಟೆಡ್​ ಗವರ್ನ್​ಮೆಂಟ್​ ಆನ್​ಲೈನ್​ ಟ್ರೇನಿಂಗ್) ಕರ್ಮಯೋಗಿ ಪೋರ್ಟಲ್‌ನಲ್ಲಿ ಆನ್‌ಲೈನ್ ವಿಧಾನವಾದ ”ಕರ್ಮಯೋಗಿ ಪ್ರಾರಂಭ” ಮೂಲಕ ತರಬೇತಿ ಪಡೆಯುವ ಅವಕಾಶ ಪಡೆಯಲಿದ್ದಾರೆ, ಇಲ್ಲಿ 800ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್‌ಗಳು ಲಭ್ಯ ಇವೆ ಎಂದೂ ಪ್ರಕಟಣೆ ಹೇಳಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × one =
Remember me
