ನವದೆಹಲಿ:ದೇಶದಲ್ಲಿ ಕರೊನಾ ವೈರಸ್​ ಸೋಂಕಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ 8ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ದೇಶದಲ್ಲಿ ಕರೊನಾ ವೈರಸ್​ ಸೋಂಕು ಹರಡುವಿಕೆ ಆರಂಭವಾದ ನಂತರದಲ್ಲಿ ಪ್ರಧಾನಿ ಮೋದಿ ಪ್ರತಿಪಕ್ಷಗಳ ನಾಯಕರ ಜತೆ ನಡೆಸುತ್ತಿರುವ ಮೊದಲ ಸಭೆ ಇದಾಗಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಮುಖಂಡರ ಜತೆ ಮೋದಿ ಚರ್ಚಿಸಲಿದ್ದಾರೆ.
ಈ ಬಗ್ಗೆ ಪತ್ರ ಬರೆದಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಷಿ, ಲೋಕಸಭೆಯಲ್ಲಿ ಐವರು ಸದಸ್ಯರು ಇದ್ದು, ಸಭಾನಾಯಕರಾಗಿರುವವರು ಮಾತ್ರ ವಿಡಿಯೋ ಕಾನ್ಫರೆನ್ಸ್​ನಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.
ಸೋಂಕು ಹರಡದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಮತ್ತು ಸೋಂಕಿನ ವಿರುದ್ಧದ ಹೋರಾಟದಲ್ಲಿ ಒಮ್ಮತದ ರಾಜಕೀಯ ಸಹಮತ ಮೂಡಿಸುವುದು ಸಭೆಯ ಉದ್ದೇಶ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರು ದೀಪ ಹಚ್ಚಲು ಹೇಳಿದ್ದಕ್ಕೆ ನಿಜವಾದ ಕಾರಣ ತಿಳಿಸಿದ ಪಿಐಬಿ; ರೂಮರ್​ಗಳನ್ನು ನಂಬಬೇಡಿ, ಜ್ಯೋತಿಷ್ಯ ಲಿಂಕ್​ ಮಾಡಬೇಡಿ ಎಂದು ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
