ಬೆಂಗಳೂರು:ಪ್ರಧಾನಿ ಮೋದಿ ಮಾರ್ಚ್ 12ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಸುಮಾರು 16,000 ಕೋಟಿ ರೂ. ವೆಚ್ಚದ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಮಂಡ್ಯದಲ್ಲಿ ಪ್ರಮುಖ ರಸ್ತೆ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದು ನಂತರ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮೂಲಸೌಕರ್ಯ ಯೋಜನೆಗಳ ತ್ವರಿತ ಅಭಿವೃದ್ಧಿಯು ದೇಶದಾದ್ಯಂತ ವಿಶ್ವ ದರ್ಜೆಯ ಸಂಪರ್ಕವನ್ನು ಖಚಿತಪಡಿಸಿಕೊಳ್ಳುವ ಭಾಗವಾಗಿ, ಪ್ರಧಾನಮಂತ್ರಿಯವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಯೋಜನೆಯು ಎನ್‌ ಹೆಚ್‌ -275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ 6-ಪಥಗಳ ರಸ್ತೆಯನ್ನು ಒಳಗೊಂಡಿರುತ್ತದೆ.
118 ಕಿಮೀ ಉದ್ದದ ಈ ಯೋಜನೆಯನ್ನು ಒಟ್ಟು 8480 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು 3 ಗಂಟೆಗಳಷ್ಟು ತೆಗೆದುಕೊಳ್ಳುವ ಬೆಂಗಳೂರು ಮತ್ತು ಮೈಸೂರು ಪ್ರಯಾಣವನ್ನು ಸುಮಾರು 1 ಮುಕ್ಕಾಲು ಗಂಟೆಗೆ ಇಳಿಸುತ್ತದೆ. ಮೈಸೂರು-ಕುಶಾಲನಗರ ನಡುವಿನ 4 ಪಥದ ಹೆದ್ದಾರಿಗೂ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದು ಸುಮಾರು 4130 ಕೋಟಿ ರೂಪಾಯಿ ವೆಚ್ಚದಲ್ಲಿ 92 ಕಿಮೀ ಉದ್ದದ ಈ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯು ಬೆಂಗಳೂರಿನೊಂದಿಗೆ ಕುಶಾಲನಗರದ ಸಂಪರ್ಕವನ್ನು ಸುಧಾರಿಸಲು ಪ್ರಮುಖ ಪಾತ್ರ ವಹಿಸಲಿದೆ.
ಇದನ್ನೂ ಓದಿ:ಪ್ರಧಾನಿ ಮೋದಿಗೆ ನಾನು ಬಿಸಿಲಿನಲ್ಲಿ ನಿಂತಿದ್ದು ಕಂಡಿದೆ, ನಾವು ಚರ್ಚಿಸಿದ ವಿಷಯ ಗೊತ್ತಾಗಿಲ್ಲ!?
ಪ್ರಧಾನಮಂತ್ರಿಯವರು ಐಐಟಿ ಧಾರವಾಡವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಫೆಬ್ರುವರಿ 2019 ರಲ್ಲಿ ನರೇಂದ್ರ ಮೋದಿ ಈ ಸಂಸ್ಥೆಗೆ ಅಡಿಪಾಯ ಹಾಕಿದ್ದರು. 850 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದ್ದು ಪ್ರಸ್ತುತ 4-ವರ್ಷದ ಬಿ.ಟೆಕ್ ಕೋರ್ಸ್‌, ಇಂಟರ್​ ಡಿಸಿಪ್ಲಿನರಿ 5-ವರ್ಷದ ಬಿಎಸ್-ಎಂಎಸ್, ಎಂ.ಟೆಕ್ ಮತ್ತು ಪಿಎಚ್.ಡಿ. ಕೋರ್ಸ್‌ ಗಳನ್ನು ಹೊಂದಿದೆ.
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ಪ್ರಧಾನಿಯವರು ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ದಾಖಲೆಯನ್ನು ಇತ್ತೀಚೆಗೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರುತಿಸಿದೆ. ಸುಮಾರು 20 ಕೋಟಿ ರೂ. ವೆಚ್ಚದಲ್ಲಿ 1507 ಮೀ ಉದ್ದದ ಪ್ಲಾಟ್‌ಫಾರ್ಮ್ ನಿರ್ಮಿಸಲಾಗಿದೆ.
ಇದನ್ನೂ ಓದಿ:ಬೆಳಗಾವಿಯಲ್ಲಿ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್ ವಿಭಾಗದ ವಿದ್ಯುದ್ದೀಕರಣ ಮತ್ತು ನವೀಕರಣಗೊಂಡ ಹೊಸಪೇಟೆ ರೈಲು ನಿಲ್ದಾಣವನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. 530 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ವಿದ್ಯುದ್ದೀಕರಣ ಯೋಜನೆಯು ತಡೆರಹಿತ ರೈಲು ಕಾರ್ಯಾಚರಣೆಯನ್ನು ಸಾಧ್ಯವಾಗಿಸುತ್ತದೆ. ಹೊಸಪೇಟೆ ನಿಲ್ದಾಣವನ್ನು ಪುನರಾಭಿವೃದ್ಧಿ ಮಾಡಲಾಗಿದ್ದು, ಪ್ರಯಾಣಿಕರಿಗೆ ಅನುಕೂಲಕರ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಇದನ್ನು ಹಂಪಿ ಸ್ಮಾರಕಗಳನ್ನು ಹೋಲುವಂತೆ ವಿನ್ಯಾಸಗೊಳಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯ ವಿವಿಧ ಯೋಜನೆಗಳನ್ನು ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳ ಒಟ್ಟು ಅಂದಾಜು ವೆಚ್ಚ ಸುಮಾರು 520 ಕೋಟಿ ರೂ.ಗಳು. ಈ ಪ್ರಯತ್ನಗಳು ನೈರ್ಮಲ್ಯ, ಸುರಕ್ಷಿತ ಮತ್ತು ಕಾರ್ಯಸಮರ್ಥ ಸಾರ್ವಜನಿಕ ಸ್ಥಳಗಳನ್ನು ನಿರ್ಮಿಸುವ ಮೂಲಕ ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತವೆ ಮತ್ತು ಪಟ್ಟಣವನ್ನು ಭವಿಷ್ಯದ ನಗರ ಕೇಂದ್ರವಾಗಿ ಪರಿವರ್ತಿಸುತ್ತವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
