ಕೊಚ್ಚಿ:ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳು ಕೇರಳ ಪ್ರವಾಸ ಕೈಗೊಳ್ಳಲಿದ್ದಾರೆ. ಒಂದು ತಿಂಗಳೊಳಗೆ ಅವರ ಎರಡನೇ ಭೇಟಿಯಾಗಿದೆ. ಜನವರಿ 16 ರಂದು ಕೊಚ್ಚಿಯಲ್ಲಿ ಬೃಹತ್​ ರೋಡ್​ ಶೋ ನಡೆಸಲಿದ್ದಾರೆ.
ಇದನ್ನೂ ಓದಿ:ಒಂದೇ ಕುಟುಂಬದ ಐವರು ಮಕ್ಕಳು ಮೃತ್ಯು, ಇಬ್ಬರ ಸ್ಥಿತಿ ಚಿಂತಾಜನಕ: ದುರಂತ ಘಟನೆ ನಡೆದಿದ್ದು ಹೇಗೆ?
ಬಿಜೆಪಿಯ ರಾಜ್ಯ ಘಟಕವು ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಮೋದಿ ಜನವರಿ 3 ರಂದು ಕೇರಳಕ್ಕೆ ಬಂದಿದ್ದರು. ಲೋಕಸಭೆ ಚುನಾವಣೆಯ ಸಿದ್ಧತೆಯನ್ನು ಸಮಗ್ರವಾಗಿ ಪರಿಶೀಲಿಸಲು ಪ್ರಧಾನಿ ಬಿಜೆಪಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ಅಂದು ಕೇರಳದಲ್ಲಿ ಕೇಂದ್ರ ಸರ್ಕಾರದ ಪ್ರಾಯೋಜಿತ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಬುಧವಾರ ಸಂಜೆ ವೇಳೆಗೆ ಪ್ರಧಾನಿ ವಾಪಸಾಗಲಿದ್ದಾರೆ.
ಜ.16ರಂದು ಕೊಚ್ಚಿಗೆ ತಲುಪಲಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ರೋಡ್​ ಶೋ ನಡೆಸಲಿದ್ದಾರೆ. ಜನವರಿ 17 ರಂದು ಬುಧವಾರ ಗುರುವಾಯೂರಿಗೆ ತೆರಳಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಟ-ರಾಜಕಾರಣಿ ಸುರೇಶ್ ಗೋಪಿ ಅವರ ಮಗಳ ಮದುವೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ಕುರಿತು ಚರ್ಚೆ:ಮುಂಬರುವ ಲೋಕಸಭೆ ಚುನಾವಣೆಗೆ ಜನವರಿ 27 ರೊಳಗೆ ತನ್ನ ಸ್ಟಾರ್ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷದಿಂದ ಹಲವು ಲೋಕಸಭೆ ಕ್ಷೇತ್ರಗಳಲ್ಲಿ ಪಾದಯಾತ್ರೆಗಳನ್ನು ನಡೆಸಲು ಯೋಜನೆ ರೂಪಿಸಲಿದೆ. ತ್ರಿಶೂರ್‌ನಲ್ಲಿ ಸುರೇಶ್ ಗೋಪಿ, ಅಟ್ಟಿಂಗಲ್‌ನಲ್ಲಿ ವಿ ಮುರಳೀಧರನ್ ಮತ್ತು ಪಾಲಕ್ಕಾಡ್‌ಗೆ ಸಿ ಕೃಷ್ಣಕುಮಾರ್ ಹೆಸರುಗಳು ಚರ್ಚೆಯಲ್ಲಿವೆ. ತಿರುವನಂತಪುರಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಲು ಬಿಜೆಪಿಯ ರಾಜ್ಯ ಘಟಕವು ಹೈಕಮಾಂಡ್​ ಅನ್ನು ಕೇಳಿದೆ ಎಂದು ವರದಿಯಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ನಾಯಕರ ಭೇಟಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತೇಜನ ನೀಡಲಿದೆ ಎಂದು ಬಿಜೆಪಿ ರಾಜ್ಯ ನಾಯಕತ್ವ ಅಭಿಪ್ರಾಯಪಟ್ಟಿದೆ.
ಕ್ರಿಕೆಟ್​ ಆಡುವಾಗಲೇ ಕುಸಿದುಬಿದ್ದು ಟೆಕ್ಕಿ ದುರ್ಮರಣ: ಮರಣೋತ್ತರ ವರದಿಯಲ್ಲಿತ್ತು ಸ್ಫೋಟಕ ಸಂಗತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 10 =
Remember me
