ನವದೆಹಲಿ:ಕೇರಳದ ಭೂ ಕುಸಿತ ಪೀಡಿತ ವಯನಾಡು ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ, ನಾಳೆ (ಆಗಸ್ಟ್ 10) ಭೇಟಿ ನೀಡಲಿದ್ದಾರೆ. ಜಿಲ್ಲೆಯ ಎರಡು ಗ್ರಾಮಗಳಿಗೆ ಪ್ರಧಾನಿ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.
ಇದನ್ನೂ ಓದಿ:17 ತಿಂಗಳ ನಂತರ ಜೈಲಿನಿಂದ ಹೊರಬಂದ ಎಎಪಿ ನಾಯಕ ಮನೀಶ್ ಸಿಸೋಡಿಯಾ
ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಕಣ್ಣೂರು ತಲುಪಲಿದ್ದಾರೆ, ಅಲ್ಲಿಂದ ಅವರು ವಯನಾಡು ಭೂ ಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಧ್ಯಾಹ್ನ 12.15ರ ಸುಮಾರಿಗೆ ವಯನಾಡ್ ಜಿಲ್ಲೆಯ ಚೂರಲ್ಮುಲಾ ಮತ್ತು ಮುಂಡಕ್ಕೈ ಗ್ರಾಮಕ್ಕೆ ಭೂ ಕುಸಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಮಾಹಿತಿ ಪಡೆಯಲಿದ್ದಾರೆ. ನಂತರ ಪ್ರಧಾನಿ ಇದೊಂದು ’ರಾಷ್ಟ್ರೀಯ ವಿಪತ್ತು’ ಎಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ನಿರಾಶ್ರಿತ ಕಾಳಜಿ ಕೇಂದ್ರ ಮತ್ತು ಗಾಯಗೊಂಡಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೋದಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ರಣಭೀಕರ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಇದುವರೆಗೆ ಮೃತ ಪಟ್ಟವರ ಸಂಖ್ಯೆ 418ಕ್ಕೆ ಏರಿದೆ. ಬಗೆದಷ್ಟು ಮೃತ ದೇಹಗಳು ಸಿಗುತ್ತಲೇ ಇರುವುದರಿಂದ ದುರಂತಕ್ಕೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.
ಧೈರ್ಯ ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eleven =
Remember me
