ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮಹತ್ವದ ಭೇಟಿಗೆ ಮುಹೂರ್ತ ಫಿಕ್ಸ್​ ಆಗಿದೆ.ಭಾರತ-ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ಜುಲೈ 8 ರಿಂದ 10 ರವರೆಗೆ ರಷ್ಯಾ ಮತ್ತು ಆಸ್ಟ್ರಿಯಾಕ್ಕೆ ಅಧಿಕೃತ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.
ಇದನ್ನೂ ಓದಿ:ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್‌ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ
22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಜುಲೈ 8 ರಿಂದ 9ರವರೆಗೆ ರಷ್ಯಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. 5 ವರ್ಷಗಳ ಮೋದಿಯವರ ಮೊದಲ ರಷ್ಯಾ ಪ್ರವಾಸ ಇದಾಗಿದೆ. 2019ರಲ್ಲಿ ಅವರು ಇಲ್ಲಿನ ವ್ಲಾಡಿವೋಸ್ಟಾಕ್​ನಲ್ಲಿ ನಡೆದ ಆರ್ಥಿಕ ಸಮಾವೇಶದಲ್ಲಿ ಭಾಗವಹಿಸಿದ್ದರು.
ಈ ಭೇಟಿ ಸಮಯದಲ್ಲಿ ರಕ್ಷಣೆ, ತೈಲ, ಅನಿಲ ಮತ್ತು ಇತರ ಭಾರತೀಯ ಕಾರ್ಯತಂತ್ರದ ಹಿತಾಸಕ್ತಿಗಳ ಕುರಿತು ಚರ್ಚೆಗಳನ್ನು ನಿರೀಕ್ಷಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪಿಎಂ ಮೋದಿ ಭಾಗಿ ನಂತರ ಮುಂದಿನ ರಷ್ಯಾ ಪ್ರವಾಸವು ಮಹತ್ವದ್ದಾಗಿದೆ. ಏಕೆಂದರೆ ಹೆಚ್ಚಿನ ಜಾಗತಿಕ ನಾಯಕತ್ವವು ಬದಲಾವಣೆ ಹಂತದಲ್ಲಿದೆ. ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳಿವೆ. ರಷ್ಯಾ ಪ್ರವಾಸ ಮುಗಿಸಿದ ನಂತರ ಮೋದಿ ಅವರು ಆಸ್ಟ್ರೀಯಾಕ್ಕೆ ಪ್ರಯಾಣಿಸಲಿದ್ದಾರೆ. 41 ವರ್ಷಗಳ ಬಳಿಕ ಆ ದೇಶ (ಆಸ್ಟ್ರೀಯಾ)ಕ್ಕೆ ಭಾರತೀಯ ಪ್ರಧಾನಿಯ ಮೊದಲ ಭೇಟಿ ಇದಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಹೈದರಾಬಾದ್​​ನಲ್ಲಿ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ: 10 ಮಂದಿ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − five =
Remember me
