ನವದೆಹಲಿ:ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್​ಯಾರ್​ ಸುರಂಗದೊಳಗೆ ಸಿಲುಕಿ, ಕಳೆದ 17 ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಹೊಸ ಬದುಕಿಗಾಗಿ ಆಸೆಗಣ್ಣುಗಳಿಂದ ಎದುರು ನೋಡುತ್ತಿದ್ದ ಎಲ್ಲ 41 ಕಾರ್ಮಿಕರನ್ನು ಸುರಕ್ಷಿತವಾಗಿ ಸುರಂಗದಿಂದ ಇಂದು ಹೊರಕರೆತರಲಾಗಿದೆ. 17 ದಿನಗಳ ನಿರಂತರ ಶ್ರಮ ಮತ್ತು ಅಸಂಖ್ಯಾತ ಜನಗಳ ಪ್ರಾರ್ಥನೆಗೆ ಫಲ ಸಿಕ್ಕಿದ್ದು, ಬಹುದೊಡ್ಡ ರಕ್ಷಣಾ ಕಾರ್ಯಾಚರಣೆ ದೊಡ್ಡ ಯಶಸ್ಸು ಸಾಧಿಸಿದೆ.
ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಉತ್ತರಖಾಶಿಯಲ್ಲಿ ಸಿಲುಕಿದ್ದ ನಮ್ಮ ಕಾರ್ಮಿಕರನ್ನು ರಕ್ಷಿಸಿರುವ ವಿಚಾರ ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.
उत्तरकाशी में हमारे श्रमिक भाइयों के रेस्क्यू ऑपरेशन की सफलता हर किसी को भावुक कर देने वाली है।टनल में जो साथी फंसे हुए थे, उनसे मैं कहना चाहता हूं कि आपका साहस और धैर्य हर किसी को प्रेरित कर रहा है। मैं आप सभी की कुशलता और उत्तम स्वास्थ्य की कामना करता हूं।यह अत्यंत…
ಇದನ್ನೂ ಓದಿ:ಯೂಟ್ಯೂಬ್​ನಲ್ಲಿ ದಾಖಲೆ ಬರೆದ ಕಾಂತಾರ ಚಾಪ್ಟರ್-1 ಫಸ್ಟ್​ಲುಕ್ ಟೀಸರ್
ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಸುರಂಗದಲ್ಲಿ ಸಿಕ್ಕಿಬಿದ್ದ ಸ್ನೇಹಿತರಿಗೆ ನಾನು ಹೇಳಲು ಬಯಸುತ್ತೇನೆ. ನಾನು ನಿಮ್ಮೆಲ್ಲರಿಗೂ ಒಳ್ಳೆಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ದೀರ್ಘಾವಧಿಯ ಕಾಯುವಿಕೆಯ ನಂತರ ನಮ್ಮ ಈ ಸ್ನೇಹಿತರು ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ತುಂಬಾ ತೃಪ್ತಿಯ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯ ಪ್ರಶಂಸನೀಯ.
ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪ್ರತಿಯೊಬ್ಬರಿಗೂ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಪ್ರತಿಯೊಬ್ಬ ಸದಸ್ಯನ ಕೆಲಸಗಳು ಮಾನವೀಯತೆಯ ಅತ್ಯುತ್ತಮ ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − eight =
Remember me
