ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ಹಾಗೂ ಜೀಪ್ ಸಫಾರಿ ಮಾಡದ್ದಾರೆ.
ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಚೊಚ್ಚಲ ಭೇಟಿ ನೀಡಿದ ಪ್ರಧಾನಿ ಮೋದಿ ಸೆಂಟ್ರಲ್ ಕೊಹೊರಾ ಮಿಹಿಮುಖ್ ಪ್ರದೇಶದಲ್ಲಿ ಆನೆ ಹಾಗೂ ಜೀಪ್​ ಸಫಾರಿ ನಡೆಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.
Prime Minister Narendra Modi enjoys the beauty of Kaziranga on an elephant safari#narendermodi|#Kaziranga#BreakingNewspic.twitter.com/2kw1FqLDiL
ಇದನ್ನೂ ಓದಿ:ಆಂಗ್ಲರ ವಿರುದ್ಧ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಟೀಮ್ ಇಂಡಿಯಾ
ಎರಡು ದಿನಗಳ ಅಸ್ಸಾಂ ಪ್ರವಾಸಕ್ಕೆ ಬಂದಿರುವ ಅವರು, ಶುಕ್ರವಾರ ಸಂಜೆ ಕಾಜಿರಂಗಕ್ಕೆ ಆಗಮಿಸಿದ್ದರು. ಪ್ರಧಾನಿಗೆ ಉದ್ಯಾನದ ನಿರ್ದೇಶಕಿ ಸೋನಾಲಿ ಘೋಷ್ ಹಾಗೂ ಇತರೆ ಹಿರಿಯ ಅರಣ್ಯ ಸಿಬ್ಬಂದಿಗಳು ಸಾಥ್‌ ನೀಡಿದರು.
ಶನಿವಾರ ಮಧ್ಯಾಹ್ನ ಅಹೊಮ್ ಜನರಲ್ ಲಚಿತ್‌ ಬರ್ಪುಕನ್‌ ಅವರ 125 ಅಡಿಯ ‘ಶೌರ್ಯದ ಪ್ರತಿಮೆ’ಯನ್ನು ಅವರು ಅನಾವರಣಗೊಳಿಸಲಿದ್ದಾರೆ. ಜೊರ್ಹತ್‌ ಜಿಲ್ಲೆಯ ಮೆಲೆಂಗ್ ಮೆಟೆಲಿ ಪೊಥರ್‌ನಲ್ಲಿ, ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಸುಮಾರು 18 ಸಾವಿರ ಕೋಟಿಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
VIDEO | PM Modi visits Kaziranga National Park in Assam.(Full video available on PTI Videos –https://t.co/n147TvqRQz)pic.twitter.com/ObigOaSyNL

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 9 =
Remember me
