ನವದೆಹಲಿ:ಮಾರಕ ಕೊರೊನಾ ವೈರಸ್​ ರಾಷ್ಟ್ರಕ್ಕೂ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಜನತೆಯ ಬೆನ್ನಿಗೆ ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಸೋಂಕು ಕುರಿತಾಗಿ ಅರಿವು ಮೂಡಿಸುವ ನಿರಂತರ ಪ್ರಯತ್ನಕ್ಕೆ ಕೈಹಾಕಿದ್ದಾರೆ.
ನಿನ್ನೆಯಷ್ಟೇ ಕೊರೊನಾ ವೈರಸ್​ ಕುರಿತಾಗಿ ಯಾರು ಭಯಪಡುವ ಅಗತ್ಯವಿಲ್ಲ ಎಂದು ಪ್ರಧಾನಿ ಮೋದಿ ಧೈರ್ಯ ತುಂಬಿದ್ದರು. ಇದೀಗ ಮತ್ತೊಮ್ಮೆ ಟ್ವೀಟ್​ ಮೂಲಕ ಜನತೆಗೆ ಸಂದೇಶ ರವಾನಿಸಿದ್ದು, ಆದಷ್ಟು ಎಲ್ಲರು ಒಟ್ಟಾಗಿ ಒಂದೆಡೆ ಸೇರುವುದನ್ನು ಕಡೆಗಣಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿಯ ಹೋಳಿ ಹಬ್ಬದಲ್ಲೂ ಪಾಲ್ಗೊಳ್ಳದಿರಲು ಮೋದಿ ನಿರ್ಧರಿಸಿದ್ದಾರೆ.
ವಿಶ್ವಾದ್ಯಂತ ಪರಿಣಿತರು ಕೊರೊನಾ ವೈರಸ್​ ಹರಡುವಿಕೆಯನ್ನು ತಡೆಗಟ್ಟಲು ಒಟ್ಟಾಗಿ ಒಂದೆಡೆ ಸೇರುವುದನ್ನು ಕಡೆಗಣಿಸಿ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ನಾನು ಈ ವರ್ಷದ ಹೋಳಿ ಹಬ್ಬದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.
Experts across the world have advised to reduce mass gatherings to avoid the spread of COVID-19 Novel Coronavirus. Hence, this year I have decided not to participate in any Holi Milan programme.
— Narendra Modi (@narendramodi)March 4, 2020

ಈಗಾಗಲೇ ರಾಷ್ಟ್ರದಲ್ಲಿ 6 ಸೋಂಕಿತ ಪ್ರಕರಣಗಳ ಪತ್ತೆಯಾಗಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಿ ವಿದೇಶದಿಂದ ಬರುವವರನ್ನು ತೀವ್ರ ತಪಾಸಣೆ ನಡೆಸಲಾಗುತ್ತಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 11 =
Remember me
