ನವದೆಹಲಿ:ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿ, ದೇಶಕ್ಕೆ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ್ದಾರೆ.
ಇಂದು ಬೆಳಗ್ಗೆ ತಮ್ಮ ಎಕ್ಷ್​ (ಟ್ವಿಟರ್​) ಖಾತೆಯಿಂದ ಟ್ವೀಟ್​ ಮಾಡಿರುವ ಪ್ರಧಾನಿ, ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸೋಣ ಮತ್ತು ಅವರ ವಿಷನ್​ ಅನ್ನು ನೆರವೇರಿಸುವ ಬದ್ಧತೆಯನ್ನು ನಾವು ಪುನರ್​ದೃಢೀಕರಿಸೋಣ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
आप सभी को स्वतंत्रता दिवस की अनेकानेक शुभकामनाएं। आइए, इस ऐतिहासिक अवसर पर अमृतकाल में विकसित भारत के संकल्प को और सशक्त बनाएं। जय हिंद!
Best wishes on Independence Day. We pay homage to our great freedom fighters and reaffirm our commitment to fulfilling their vision. Jai Hind!
— Narendra Modi (@narendramodi)August 15, 2023

77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಅವರ ಸತತ 10 ಸ್ವಾತಂತ್ರ್ಯೋತ್ಸವದ ಭಾಷಣವಾಗಿದೆ. ಮೋದಿ ಅವರು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ಬಳಿಕ ಇಂದು ಬೆಳಿಗ್ಗೆ 7.30ರ ಸುಮಾರಿಗೆ ಭಾಷಣ ಆರಂಭಿಸಲಿದ್ದಾರೆ.
ಪ್ರಧಾನಿ ಮೋದಿಯವರ ಭಾಷಣವನ್ನು ರಾಷ್ಟ್ರೀಯ ಸಾರ್ವಜನಿಕ ಪ್ರಸಾರಕ ದೂರದರ್ಶನ ನೇರಪ್ರಸಾರ ಮಾಡಲಿದ್ದು, ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಕೂಡ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ಹಾಗೂ ಅದರ ಟ್ವಿಟರ್ ಹ್ಯಾಂಡಲ್ ನಲ್ಲಿ ಭಾಷಣವನ್ನು ನೇರ ಪ್ರಸಾರ ಮಾಡಲಿದೆ. ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಅಧಿಕೃತ ಯೂಟ್ಯೂಬ್ ಚಾನೆಲ್ ಕೂಡ ಪ್ರಧಾನಿ ಭಾಷಣವನ್ನು ಪ್ರಸಾರ ಮಾಡಲಿದೆ.(ಏಜೆನ್ಸೀಸ್​)
ದ್ವಿತೀಯ ಪಿಯು ಪರೀಕ್ಷೆ ಸರಳಗೊಳಿಸಿದ ಶಿಕ್ಷಣ ಇಲಾಖೆ; ಮಾದರಿ ಪ್ರಶ್ನೆಪತ್ರಿಕೆ ಪ್ರಕಟಿಸಿದ ಪರೀಕ್ಷಾ ಮಂಡಳಿ

ಮನಮೋಹನ್ ದಾಖಲೆ ಸರಿಗಟ್ಟುವ ಮೋದಿ: 77ನೇ ಸ್ವಾತಂತ್ರ್ಯ ಸಂಭ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eight =
Remember me
