ಚೆನ್ನೈ:ಪ್ರಧಾನಿ ಮೋದಿ ಸಹೋದರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ಮೋದಿಗೆ ಐವರು ಒಡಹುಟ್ಟಿದವರಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಾಗಿರುವ ಪ್ರಹ್ಲಾದ್ ಮೋದಿ ಅವರಿಗಿಂತ ಚಿಕ್ಕವರು. ಪ್ರಹ್ಲಾದ್ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಕಿರಾಣಿ ಅಂಗಡಿಯನ್ನು ನಡೆಸುತ್ತಿದ್ದಾರೆ. ಅದಲ್ಲದೇ ಟೈರ್ ಶೋರೂಮ್ ಕೂಡ ಹೊಂದಿದ್ದಾರೆ.
ಇದನ್ನೂ ಓದಿ:ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್​ ಮೋದಿ ಕುಟುಂಬ ಪ್ರಯಾಣಿಸುತ್ತಿದ್ದ ಕಾರ ಅಪಘಾತ: ಗಾಯಾಳುಗಳ ಆರೋಗ್ಯಸ್ಥಿತಿ ಕುರಿತು ವೈದ್ಯರು ಹೇಳಿದ್ದೇನು?
ಕಳೆದ ವರ್ಷ ಡಿಸೆಂಬರ್ 27 ರಂದು ಮೈಸೂರು ಜಿಲ್ಲೆಯ ಬಳಿ ಪ್ರಧಾನಿ ಮೋದಿಯವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಮತ್ತು ಅವರ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದರು.
ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಪ್ರವಾಸಿ ತಾಣ ಬಂಡೀಪುರ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
70 ವರ್ಷದ ಪ್ರಹ್ಲಾದ್ ಮೋದಿ ಅವರ ಗಲ್ಲದ ಮೇಲೆ ಗಾಯವಾಗಿತ್ತು. ಅವರ ಮಗ ಮೆಹುಲ್ ಪ್ರಹ್ಲಾದ್ ಮೋದಿ (40), ಸೊಸೆ ಜಿನಾಲ್ ಮೋದಿ ಮತ್ತು 6 ವರ್ಷದ ಮೊಮ್ಮಗ ಮೆನತ್ ಮೆಹುಲ್ ಮೋದಿ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಆರೋಪಿ ಚಾಲಕ ಸತ್ಯನಾರಾಯಣ ಎಂಬುವರಿಗೂ ಗಾಯಗಳಾಗಿವೆ. ಸತ್ಯನಾರಾಯಣ ಅವರ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.
ಇದನ್ನೂ ಓದಿ:ಜಪಾನ್​ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ಗುಂಡಿನ ದಾಳಿಗೆ ತೀವ್ರ ಖಂಡನೆ: ಸ್ನೇಹಿತನ ಕುರಿತು ಪ್ರಧಾನಿ ಮೋದಿ ಟ್ವೀಟ್​​
ಪ್ರಧಾನಿ ಮೋದಿಗೆ ಒಬ್ಬ ಸಹೋದರಿ ಮತ್ತು ನಾಲ್ವರು ಸಹೋದರರಿದ್ದಾರೆ. ಸೋಮ ಮೋದಿ, ಅಮೃತ್ ಮೋದಿ, ಪಂಕಜ್ ಮೋದಿ, ಪ್ರಹ್ಲಾದ್ ಮೋದಿ ಮತ್ತು ಸಹೋದರಿ ವಸಂತಿ ಮೋದಿ. ಸೋಮ ಮೋದಿ ಅವರು ಆರೋಗ್ಯ ಇಲಾಖೆಯಿಂದ ನಿವೃತ್ತರಾಗಿರುವ ಪ್ರಧಾನಿಯವರ ಹಿರಿಯ ಸಹೋದರ. ಪ್ರಸ್ತುತ, ಸೋಮ ಮೋದಿ ಅಹಮದಾಬಾದ್‌ನಲ್ಲಿ ವೃದ್ಧಾಶ್ರಮವನ್ನು ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 3 =
Remember me
