ಅಹಮದಾಬಾದ್​: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​ ಮೋದಿ(100) ಶುಕ್ರವಾರ ಬೆಳಗಿನಜಾವ ನಿಧನರಾದರು. ಹೀರಾಬೆನ್​ ಇನ್ನಿಲ್ಲ ಎಂಬ ಸುದ್ದಿ ಕೇಳಿ ದೇಶಾದ್ಯಂತ ಜನತೆ, ಗಣ್ಯರು ಕಂಬನಿ ಮಿಡಿದಿದ್ದಾರೆ. ತಾಯಿ ನೆನೆದು ಅತ್ಯಂತ ಭಾವುಕರಾಗಿರುವ ಪ್ರಧಾನಿ ಮೋದಿ ಅವರು, ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.
‘ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ. ನನ್ನ ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರುಗಳ ಶಕ್ತಿ, ಪ್ರೀತಿ, ವಾತ್ಸಲ್ಯವನ್ನು ಅನುಭವಿಸಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಸ್ವಾರ್ಥ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು ನನ್ನ ತಾಯಿ’ ಎಂದು ಬರೆದುಕೊಂಡು ಹೀರಾಬೆನ್​ರ ಫೋಟೋವನ್ನು ಹಾಕಿಕೊಂಡಿದ್ದಾರೆ.
शानदार शताब्दी का ईश्वर चरणों में विराम… मां में मैंने हमेशा उस त्रिमूर्ति की अनुभूति की है, जिसमें एक तपस्वी की यात्रा, निष्काम कर्मयोगी का प्रतीक और मूल्यों के प्रति प्रतिबद्ध जीवन समाहित रहा है।pic.twitter.com/yE5xwRogJi
— Narendra Modi (@narendramodi)December 30, 2022

ಹೀರಾಬೆನ್​ ಮೋದಿ ಅವರಿಗೆ ದೇಶಾದ್ಯಂತ ಕೋಟ್ಯಂತರ ಜನತೆ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಅಮಿತ್​ ಶಾ, ಗುಜರಾತ್​ ಸಿಎಂ ಭೂಪೇಂದ್ರ ಪಟೇಲ್, ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಸೇರಿದಂತೆ ಸಹಸ್ರಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
My heartfelt condolences to PM@narendramodion the passing away of his mother Heeraben Modi. She was a centenarian who lived a full life, but one wishes a mother to be around, forever, to energise and anchor. May God give Shri. Modi the strength to bear the loss. Om Shanti.pic.twitter.com/MvEUowUyPA
— H D Devegowda (@H_D_Devegowda)December 30, 2022

ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.
ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಓಂ ಶಾಂತಿಃhttps://t.co/7dLUarH8Qz
— Basavaraj S Bommai (@BSBommai)December 30, 2022

Deeply saddened by the passing away of Smt. Heeraben Modi ji. My prayers and condolences are with Shri@narendramodiji and family members.
— B.S.Yediyurappa (@BSYBJP)December 30, 2022

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ನಿಧನ

ಫುಟ್ಬಾಲ್​ ದಿಗ್ಗಜ ಪೀಲೆ ಇನ್ನಿಲ್ಲ: 3 ಬಾರಿ ವಿಶ್ವಕಪ್​ ಟೂರ್ನಿ ಗೆದ್ದಿದ್ದ ಬ್ರೆಜಿಲ್​ನ ಸ್ಟಾರ್​ ಆಟಗಾರ ಇನ್ನು ನೆನಪು ಮಾತ್ರ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 + thirteen =
Remember me
