ಲಖನೌ:ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಜೂನ್​​ 18) ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ. ಅವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಗರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಪ್ರಧಾನಿ ಮೋದಿ ಅವರು ಕಾಶಿಗೆ ಆಗಮಿಸಿ ತಮ್ಮ ಸಂಸದೀಯ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಈ ಪ್ರವಾಸ ಮೊದಲಿಗೆ ರೈತ ಸಮಾವೇಶದಿಂದ ಆರಂಭವಾಗಲಿದೆ. ಇದಾದ ನಂತರ ಪ್ರಧಾನಿ ಮೋದಿ ಎಂಟು ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇದನ್ನು ಓದಿ:ಪಶ್ಚಿಮ ಬಂಗಾಳದಲ್ಲಿ ರೈಲು ದುರಂತ; ಸಾವಿನ ಸಂಖ್ಯೆ 15ಕ್ಕೆ ಏರಿಕೆ..ಹಲವರಿಗೆ ಗಾಯ
ರೋಡ್​ ಶೋ ಬಳಿಕ ಪುರಾತನ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಗಂಗಾ ಆರತಿಯಲ್ಲಿ ಭಾಗವಹಿಸಲಿದ್ದಾರೆ. ಕಾಶಿಯ ಕೊತ್ವಾಲ್ ಕಾಲಭೈರವ್ ಮತ್ತು ಬಾಬಾ ವಿಶ್ವನಾಥನ ದರ್ಶನ ಮತ್ತು ಪೂಜೆಯ ನಂತರ ಅವರು ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಮಾತೆಯನ್ನು ಪೂಜಿಸಲಿದ್ದಾರೆ ಮತ್ತು ಆರತಿಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ ಅವರು ಮಂಗಳವಾರ ಸಂಜೆ 4.30ರ ಸುಮಾರಿಗೆ ಬತ್‌ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಿರ್ಜಾಮುದರ್‌ನ ಮೆಹದಿಗಂಜ್‌ನಲ್ಲಿರುವ ರೈತರ ಸಂವಾದ ಕಾರ್ಯಕ್ರಮದ ಸ್ಥಳಕ್ಕೆ ತಲುಪಲಿದ್ದಾರೆ. ಇಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಹಾಗೂ ಕಾಶಿಯ 2,76,665 ರೈತರಿಗೆ ಪ್ರಯೋಜನವಾಗುವ ಯೋಜನೆಯಾದ ​ಸಮ್ಮಾನ್ ನಿಧಿಯ 17ನೇ ಕಂತನ್ನು ಬಿಡುಗಡೆ ಮಾಡಲು ಪಿಎಂ ಮೋದಿ ಮೊದಲು ‘ಕಿಸಾನ್ ಸಮ್ಮೇಳನ’ದಲ್ಲಿ ಭಾಗವಹಿಸಲಿದ್ದಾರೆ.
ನಂತರ ಕೃಷಿ ಸಖಿಗಳಾಗಿ ತರಬೇತಿ ಪಡೆದ 30 ಸಾವಿರಕ್ಕೂ ಹೆಚ್ಚು ಸ್ವಸಹಾಯ ಸಂಘಗಳ ಸದಸ್ಯರಿಗೆ ಪ್ರಮಾಣ ಪತ್ರ ನೀಡಿ, ಕಾಶಿಯಿಂದ ಡಿಜಿಟಲ್ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಕೆಸಿ) ಬಿಡುಗಡೆ ಮಾಡಲಿದ್ದಾರೆ. ಪ್ರಧಾನಿಯವರು ರೈತರೊಂದಿಗೆ ಸಂವಾದ ನಡೆಸುವುದು ಮಾತ್ರವಲ್ಲದೆ ಅವರ ಸ್ಟಾಲ್‌ಗಳಿಗೆ ಭೇಟಿ ನೀಡಿ ಅವರು ಬೆಳೆದ ಉತ್ಪನ್ನಗಳನ್ನು ವೀಕ್ಷಿಸಲಿದ್ದಾರೆ. 21 ಪ್ರಗತಿಪರ ರೈತರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ ಅವರ ಭೇಟಿ ನಗರದ ಜನತೆಗೆ ಹೆಮ್ಮೆಯ ವಿಷಯವಾಗಿದೆ. “ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಮೂರನೇ ಬಾರಿಗೆ ಸಂಸದರಾಗಿ ಮತ್ತು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ” ಎಂದು ವಾರಣಾಸಿ ಬಿಜೆಪಿ ಅಧ್ಯಕ್ಷ ದಿಲೀಪ್ ಪಟೇಲ್ ಹೇಳಿದರು. (ಏಜೆನ್ಸೀಸ್​​)
ನೀಟ್​ ವಿವಾದ; ಸುಪ್ರೀಂಕೋರ್ಟ್​ ಮೇಲ್ವಿಚಾರಣೆಯಲ್ಲಿ ತನಿಖೆಗೆ ಆಗ್ರಹಿಸಿದ ಕಪಿಲ್ ಸಿಬಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 16 =
Remember me
