ಭುವನೇಶ್ವರ; ಯಾಸ್ ಚಂಡಮಾರುತ ಪೀಡಿತ ಒಡಿಶಾ ರಾಜ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದರು. ಬಳಿಕ ಚಂಡಮಾರುತದಿಂದ ತತ್ತರಿಸಿರುವ ಒಡಿಶಾಕ್ಕೆ 500 ಕೋಟಿ ರೂಪಾಯಿ ಘೋಷಣೆ ಮಾಡಿದರು.
ಇದಕ್ಕೂ ಮುನ್ನ ಅವರು ಭದ್ರಕ್, ಪೂರ್ವ ಮೇದಿನಿಪುರ ಹಾಗೂ ಬಾಲೆಸೂರ್ ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ನಂತರ ಉನ್ನತ ಅಧಿಕಾರಿಗಳ ಸಭೆ ನಡೆಸಿದರು.
ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಹಾನಿಯನ್ನು ಅಂದಾಜು ಮಾಡಲು ಕೇಂದ್ರ ಸರ್ಕಾರದ ಉನ್ನತ ಮಟ್ಟದ ನಿಯೋಗವನ್ನು ಕಳಿಸಲಾಗುವುದು. ಒಡಿಶಾದೊಂದಿಗೆ ಕೇಂದ್ರ ಸರ್ಕಾರ ಇದೆ ಎಂದು ಹೇಳಿದರು.
ಒಡಿಶಾ ಸರ್ಕಾರ ಪರಿಹಾರಕ್ಕಾಗಿ ಯಾವುದೇ ಅರ್ಜಿಯನ್ನು ದಾಖಲಿಸಿದ್ದಿದ್ದರೂ ಕೇಂದ್ರ ಸರ್ಕಾರ ಕೂಡಲೇ 500 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ.
ಯಾಸ್ ಚಂಡಮಾರುತಕ್ಕೆ ಒಡಿಶಾದಲ್ಲಿ ಅಪಾರ ಹಾನಿಯಾಗಿದ್ದು ಸುಮಾರು 1.77 ಲಕ್ಷ ಮನೆಗಳಿಗೆ ಹಾನಿಯಾಗಿದೆ‌. ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಅವರು ಹಾನಿ ಸಮೀಕ್ಷೆ ನಡೆಸಿದ ನಂತರ ಕೇಂದ್ರ ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ;ಹಣ ಕೊಡದಿದ್ದಕ್ಕೆ ಪಾದಚಾರಿ ಮಾರ್ಗದಲ್ಲಿ ಶವ ಇಟ್ಟು ಪರಾರಿ; ಆಂಬುಲೆನ್ಸ್​ ಚಾಲಕನ ಸೆರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
