ನವದೆಹಲಿ:ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬೀಗಿರುವ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಂತೆ ಕಾಂಗ್ರೆಸ್​ಗೆ​ ನನ್ನ ಶುಭಾಶಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Congratulations to the Congress Party for their victory in the Karnataka Assembly polls. My best wishes to them in fulfilling people’s aspirations.
ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

I thank all those who have supported us in the Karnataka elections. I appreciate the hardwork of BJP Karyakartas. We shall serve Karnataka with even more vigour in the times to come.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ಗೆಲುವಿನ ಬಗ್ಗೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. “ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿಗಳು ತೆರೆದಿವೆ” ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ನಿರೀಕ್ಷೆ ಊಹಿಸಲಾಗದ ರೀತಿಯಲ್ಲಿ ಉಲ್ಟಾ ಹೊಡೆದಿದೆ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಲು ಮುಂದಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಯಾರು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಬಗ್ಗೆ ಜನರಿಗೆ ಕುತೂಹಲ ಹೆಚ್ಚಿದೆ.
ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಪಷ್ಟ ಬಹುಮತದೊಂದಿಗೆ ಪಡೆಯುವ ಮೂಲಕ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್​ನ್ನು ದಾಟಿದೆ. ಆಡಳಿತ ಪಕ್ಷವಾಗಿದ್ದ ಬಿಜೆಪಿ 64 ಸ್ಥಾನಗಳನ್ನು ಗೆದ್ದುಕೊಂಡಿದ್ದ, ಪಕ್ಷದ ಪ್ರಮುಖ ನಾಯಕರು ಸೋಲು ಕಂಡಿದ್ದಾರೆ. ಅಂತೆಯೇ ಜೆಡಿಎಸ್ 20 ಸ್ಥಾನಗಳಿಗೆ ತೃಪ್ತಿ ಪಟ್ಟಿದ್ದು, 4 ಪಕ್ಷೇತರ ಅಭ್ಯರ್ಥಿಗಳು ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − eight =
Remember me
