ನವದೆಹಲಿ:ಮಹಾಮಾರಿ ಕರೊನಾ ಪ್ರಕರಣಗಳು ದೇಶಾದ್ಯಂತ ಮತ್ತೆ ಹೆಚ್ಚಳವಾಗುತ್ತಿರು ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ ಪ್ರಧಾನಿ ಮೋದಿ ಕರೊನಾ ನಿಯಂತ್ರಣಕ್ಕೆ ತರುವಂತೆ ಸೂಚನೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್​ ಮೂಲಕ ಮುಖ್ಯಮಂತ್ರಿಗಳ ಜತೆ ಸಂವಾದ ನಡೆಸಿದ ಪ್ರಧಾನಿ ಮೋದಿ, ರಾಜ್ಯಗಳಲ್ಲಿ ಸದ್ಯದ ವಸ್ತು ಪರಿಸ್ಥಿತಿ ಮತ್ತು ಲಸಿಕೆ ವಿತರಣೆ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ, ಲಸಿಕೆ ನೀಡುವ ಪ್ರಮಾಣ ಮತ್ತು ಕರೊನಾ ಟೆಸ್ಟ್​ಗಳನ್ನು ಹೆಚ್ಚಿಸಿ ಎಂದು ಹೇಳಿದ್ದಾರೆ.
ಇದನ್ನೂ ಓದಿರಿ:ಪತ್ನಿ ಇರುವಾಗಲೇ ಇನ್ನೊಬ್ಬಳ ಜತೆ ಲೈಂಗಿಕ ಸಂಪರ್ಕ ಹೊಂದಿದರೆ ಕಾನೂನು ಏನು ಹೇಳುತ್ತದೆ?
ಇನ್ನು ಸಾಮಾಜಿಕ ಅಂತರ ಮತ್ತು ಮಾಸ್ಕ್​ ಧರಿಸುವುದು ಕಡ್ಡಾಯಗೊಳಿಸಲು ಪ್ರಧಾನಿ ಸೂಚಿಸಿದ್ದು, ಕರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹೇಳಿದ್ದಾರೆ. ಕರೊನಾ ನಿಯಂತ್ರಿಸಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರಗಳು ತೆಗೆದುಕೊಳ್ಳುವಂತೆ ಸಲಹೆ ಇದೇ ವೇಳೆ ಪ್ರಧಾನಿ ನೀಡಿದರು.
ವಿಧಾನ ಸೌಧ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಸಂವಾದದಲ್ಲಿ ಭಾಗಿಯಾದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಕರೊನಾ ಸೋಂಕಿನಿಂದ ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ದಿಲೀಪ್​ ಗಾಂಧಿ ನಿಧನ

ದೆಹಲಿ ನಿವಾಸದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬಿಜೆಪಿ ಸಂಸದ ರಾಮ್​ ಸ್ವರೂಪ್​ ಶರ್ಮಾ ಶವ ಪತ್ತೆ

ಲಾರಿ ಡಿಕ್ಕಿಯ ರಭಸಕ್ಕೆ ಕುಸಿದ ಹೋಟೆಲ್ ಕಟ್ಟಡ: ಅದೃಷ್ಟವಶಾತ್​ ತಪ್ಪಿತು ಭಾರೀ ಅನಾಹುತ! ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
