ಮಿಜೋರಾಂ:ಮಿಜೋರಾಂ ರಾಜಧಾನಿ ಐಜ್ವಾಲ್ ಬಳಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಕುಸಿದು ಭಾರಿ ಅನಾಹುತ ಸಂಭವಿಸಿದೆ. ಈ ಅಪಘಾತದಲ್ಲಿ 17 ಕಾರ್ಮಿಕರು ಸಾವನ್ನಪ್ಪಿದ್ದಾರೆ. 30 ರಿಂದ 40 ಕಾರ್ಮಿಕರು ಅವಶೇಷಗಳಡಿ ಹೂತು ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಈ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗಬಹುದು. ಮಿಜೋರಾಂನ ರೈಲ್ವೆ ಓವರ್ ಬ್ರಿಡ್ಜ್ ಯೋಜನೆಯಡಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಈ ಅಪಘಾತದ ಬಗ್ಗೆ ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಈ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.
‘ಚಂದ್ರಯಾನ 3 ನೇರಪ್ರಸಾರ ಮಾಡಿ…’, ಒಂದು ಕಾಲದಲ್ಲಿ ಇಸ್ರೋವನ್ನು ಗೇಲಿ ಮಾಡುತ್ತಿದ್ದ ಪಾಕ್ ಮಾಜಿ ಸಚಿವ ಒತ್ತಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 4 =
Remember me
