ನವದೆಹಲಿ:ಇಂದು ನವದೆಹಲಿಯಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಹೊಸದಾಗಿ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದರು. ಈ ಮೂಲಕ ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಾದ್ಯಂತ ರೈಲು ಸಂಪರ್ಕವನ್ನು ಹೆಚ್ಚಿಸಿದರು.
ಇದನ್ನೂ ಓದಿ:ಕರ್ನಾಟಕದ ಸ್ಥಿತಿ ಏನಾಗಿದೆ ಎಂಬುದನ್ನು ನೋಡಲು ರಾಹುಲ್ ಗಾಂಧಿ ಬರಲಿ: ಪ್ರಲ್ಹಾದ್​ ಜೋಶಿ
ರೈಲ್ವೇ ಸಚಿವಾಲಯವು ಭಾರತದ ‘ಮೇಕ್ ಇನ್ ಇಂಡಿಯಾ’ ಮತ್ತು ಆತ್ಮನಿರ್ಭರ್ ಭಾರತ್ ಉಪಕ್ರಮಗಳೊಂದಿಗೆ ಹೊಂದಿಕೆಯಾಗುವ, ವೇಗವಾದ, ಹೆಚ್ಚು ಆರಾಮದಾಯಕ ಪ್ರಯಾಣವನ್ನು ಉತ್ತೇಜಿಸುವಲ್ಲಿ ಈ ರೈಲುಗಳ ಮಹತ್ವವನ್ನು ಎತ್ತಿ ತೋರಿಸಿದೆ.
ದೇಶದ ವಿಕಾಸಯಾತ್ರೆ ಅಡಿಯಲ್ಲಿ ಎಲ್ಲೆಡೆ ಸಂಪರ್ಕ ಕಲ್ಪಿಸಲಾಗುತ್ತಿದೆ. ವಿಸ್ತರಿಸಿದ ವಂದೇ ಭಾರತ್ ವಿಕಸಿತ ಭಾರತಕ್ಕೆ ಪೂರಕವಾಗಿದೆ. ಮಂದಿರ ನಗರ ಮದುರೈಯನ್ನು ದೇಶದ ಇಟಿ ನಗರ ಬೆಂಗಳೂರು ಜೊತೆ ಸಂಪರ್ಕಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದರಲ್ಲಿ ಬೆಂಗಳೂರು=ತಮಿಳುನಾಡಿನ ಮಧುರೈ ನಡುವೆ ಸಂಚರಿಸುವ ಹೊಸ ವಂದೇ ಭಾರತ್ ರೈಲು ಸೇರಿದೆ. ಕೇಸರಿ ಬಣ್ಣದ ಈ ಹೊಸ ವಂದೇ ಭಾರತ್​ ರೈಲು ಮಂಗಳವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಮಧುರೈ-ಬೆಂಗಳೂರು ಬೆಂಗಳೂರು-ಮಧುರೈ ಸಂಚರಿಸಲಿದೆ.
ಬೆಂಗಳೂರು ಮದುರೈ ನಡುವಿನ 430 ಕಿಲೋಮೀಟರ್ ದೂರ ಪ್ರಯಾಣವನ್ನು ವಂದೇ ಭಾರತ್ ರೈಲು 8 ಗಂಟೆಯಲ್ಲಿ ಕ್ರಮಿಸಲಿದೆ. ಹಾಲಿ ಇರುವ ಎಕ್ಸ್‌ಪ್ರೆಸ್ ರೈಲುಗಳು ಈ ದೂರ ಕ್ರಮಿಸಲು 9 ಗಂಟೆ ಸಮಯ ತೆಗದುಕೊಳ್ಳುತ್ತದೆ. ಮಧುರೈಯಿಂದ 20671 ವಂದೇ ಭಾರತ್ ರೈಲು ಹಾಗೂ ಬೆಂಗಳೂರಿನಿಂದ 20672 ರೈಲು ಪ್ರಯಾಣ ನಡೆಸಲಿದೆ. ಬೆಂಗಳೂರಿನ ಕಂಟೊನ್ಮೆಂಟ್ ರೈಲು ನಿಲ್ದಾಣದಿಂದ ಮಧ್ಯಾಹ್ನ 1.30ಕ್ಕೆ ಈ ರೈಲು ಹೊರಡಲಿದೆ. ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ಮೊದಲ ನಿಲುಗಡೆಯಾಗಲಿದೆ. ಬಳಿಕ ಸೇಲಂ, ನಮಕ್ಕಲ್, ಕರೂರ್, ತಿರುಚಿರಾಪಲ್ಲಿ, ದಿಂಡುಗಲ್ ರೈಲು ನಿಲ್ದಾಣದಲ್ಲಿ ನಿರುಗಡೆಯಾಗಲಿದೆ. ಮಧ್ಯಾಹ್ನ 1.30ಕ್ಕೆ ಹೊರಟ ರೈಲು ಮದುರೈಗೆ ರಾತ್ರಿ 9.45ಕ್ಕೆ ತಲುಪಲಿದೆ. ಮದುರೈನಿಂದ ಬೆಳಗ್ಗೆ 5.15ಕ್ಕೆ ಹೊರಡುವ ರೈಲು ಮಧ್ಯಾಹ್ನ 1.ಗಂಟೆಗೆ ಬೆಂಗಳೂರು ತಲುಪಲಿದೆ.
‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ಫೆಬ್ರವರಿ 15, 2019ರಂದು ಮೊದಲ ಬಾರಿಗೆ ಪರಿಚಯಿಸಲಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಯಾಣದಲ್ಲಿ ಐಷಾರಾಮಿ ಮತ್ತು ವೇಗದ ಸಂಕೇತವಾಗಿದೆ. ಪ್ರಸ್ತುತ, 100ಕ್ಕೂ ಹೆಚ್ಚು ವಂದೇ ಭಾರತ್ ರೈಲು ಸೇವೆಗಳು ಕಾರ್ಯನಿರ್ವಹಿಸುತ್ತಿವೆ. ಇವು ದೇಶಾದ್ಯಂತ 280ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುತ್ತವೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − two =
Remember me
