ಬೆಂಗಳೂರು:ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಚರ್ಚಿಸಲು ಹೆಚ್​ಡಿ ದೇವೇಗೌಡರ ನೇತೃತ್ವದ ಜೆಡಿಎಸ್ ನಿಯೋಗವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ  ಜತೆ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿಗೆ ದಳಪತಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಹೆಚ್​ಡಿ ದೇವೇಗೌಡ, ಎಚ್​ಡಿ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಇದ್ದರು.

Always a delight to meet former PM Shri@H_D_DevegowdaJi, Shri@hd_kumaraswamyJi and Shri HD Revanna Ji.
India greatly cherishes Deve Gowda Ji's exemplary contribution to the nation's progress. His thoughts on diverse policy matters are insightful and futuristic.pic.twitter.com/Xa3YImOLYz
— Narendra Modi (@narendramodi)December 21, 2023

ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದು, ಹೆಚ್​ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ ಎಂದು ಹೇಳಿಕೊಂಡಿದ್ದಾರೆ. ಕೆಲವು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನವದೆಹಲಿಯ ಸಂಸತ್ ಭವನದ ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಮಾನ್ಯ ಪ್ರಧಾನಿಗಳಾದ ಶ್ರೀ@narendramodiಅವರನ್ನು ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ@H_D_Devegowdaಅವರೊಂದಿಗೆ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ಪರಿಸ್ಥಿತಿಗಳ ಜತೆಗೆ, ಕರ್ನಾಟಕದ ರೈತಾಪಿ ಜನರ ಸಮಸ್ಯೆಗಳನ್ನು ಮಾನ್ಯ ಪ್ರಧಾನಿಗಳ ಗಮನಕ್ಕೆ ತರಲಾಯಿತು.…pic.twitter.com/ytALX1OIBr
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)December 21, 2023

ಮಾಜಿಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಟ್ವೀಟ್​​ ಮಾಡಿ, ನವದೆಹಲಿಯ ಸಂಸತ್ ಭವನದ ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಪ್ರಧಾನಿ ಮೋದಿ  ಅವರನ್ನುಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ಪರಿಸ್ಥಿತಿಗಳ ಜತೆಗೆ, ಕರ್ನಾಟಕದ ರೈತಾಪಿ ಜನರ ಸಮಸ್ಯೆಗಳನ್ನು ಮಾನ್ಯ ಪ್ರಧಾನಿಗಳ ಗಮನಕ್ಕೆ ತರಲಾಯಿತು. ಅಲ್ಲದೆ, ಕೊಬರಿ ಖರೀದಿಯ ಬಗ್ಗೆ ಅವರಿಗೆ ಅಹವಾಲು ಸಲ್ಲಿಸಲಾಯಿತು. ನಮ್ಮ ಮನವಿಗೆ ಮಾನ್ಯ ಪ್ರಧಾನಿಗಳು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದಿದ್ದಾರೆ.
ಬಿಗ್ ಬಾಸ್ ಸ್ಪರ್ಧಿಗೆ ಬಿಗ್ ಶಾಕ್; ದೊಡ್ಡ ಮನೆ ಆಟಗಾರ ಅರೆಸ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
