ಭೂತಾನ್​:ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಭೂತಾನ್ ಪ್ರವಾಸ ಕೈಗೊಂಡಿದ್ದರು. ನೆರೆಯ ದೇಶ ಭೂತಾನ್‌ಗೆ ಕಾಲಿಡುತ್ತಿದ್ದಂತೆ ಭಾರತದ ಪ್ರಧಾನಮಂತ್ರಿಗೆ ಅದ್ಧೂರಿ ಸ್ವಾಗತ ದೊರೆಯಿತು. ಕಾರ್ಯಕ್ರಮಗಳ ನಂತರ ಭೂತಾನ್​ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್​ ಆಫ್​ ದಿ ಡ್ರಕ್​ ಗ್ಯಾಲ್ಪೋ’ ಅನ್ನು ಪ್ರಧಾನಿ ಮೋದಿಗೆ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ:‘ನನ್ನ ಜೀವನ ದೇಶಕ್ಕಾಗಿ ಮುಡಿಪು’; ಬಂಧನದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ
ಈ ಪ್ರಶಸ್ತಿಯನ್ನು ಭೂತಾನ್ ದೊರೆ ಜಿಗ್ಮೆ ಖೇಸರ್​ ನಾಂಗೇಲ್ ವಾಕ್​ಚುಕ್​ ಮೋದಿ ಅವರಿಗೆ ನೀಡಿ ಗೌರವಿಸಿದರು. ವಿಶೇಷವಾಗಿ ನರೇಂದ್ರ ಮೋದಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಇನ್ನು ಅವಾರ್ಡ್​ ಪಡೆದ ಬಗ್ಗೆ ಮಾತನಾಡಿದ ಪ್ರಧಾನಿ, ‘ನಾನು ಇದನ್ನು 140 ಕೋಟಿ ಭಾರತೀಯರಿಗೆ ಅರ್ಪಿಸುತ್ತೇನೆ’ ಎಂದರು.
Honoured to be conferred with 'Order of the Druk Gyalpo' Award by Bhutan. I dedicate it to 140 crore Indians.https://t.co/gNa7YlcFfG
— Narendra Modi (@narendramodi)March 22, 2024

“ಈ ಗೌರವ ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತ ಮತ್ತು 140 ಕೋಟಿ ಭಾರತೀಯರ ಗೌರವ. ಭೂತಾನ್‌ನ ಈ ಮಹಾನ್ ಭೂಮಿಯಲ್ಲಿರುವ ಎಲ್ಲಾ ಭಾರತೀಯರ ಪರವಾಗಿ ನಾನು ಈ ಗೌರವವನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಮತ್ತು ಈ ಪ್ರಶಸ್ತಿಗಾಗಿ ನನ್ನ ಹೃದಯದ ಅಂತರಾಳದಿಂದ ಧನ್ಯವಾದ ತಿಳಿಸುತ್ತೇನೆ” ಎಂದು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋದಿ ಹೇಳಿದರು,(ಏಜೆನ್ಸೀಸ್).
‘ಇದೆಲ್ಲವೂ ನನ್ನ ಕುಟುಂಬದ ಮೇಲೆ ಪರಿಣಾಮ ಬೀರಿದೆ’; ಕಡೆಗೂ ಮೌನ ಮುರಿದ ಚಹಲ್ ಪತ್ನಿ!

ಶ್ರೀಲೀಲಾ ಜತೆ ನಟಿಸಲು ಸ್ಟಾರ್​ ನಟರಿಗೆ ಚಿಂತೆ! ಇದು ಮುಂದುವರಿದ್ರೆ ‘ಕಿಸ್’​ ಬೆಡಗಿಗೆ ಸಂಕಷ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
