ನವದೆಹಲಿ:ಏಕದಿನ ವಿಶ್ವಕಪ್​ ಕ್ರಿಕೆಟ್​ನ ಎರಡನೇ ಸೆಮಿಫೈನಲ್ಸ್​ನಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ದಕ್ಷಿಣ ಆಫ್ರಿಕ ಎಲ್ಲ ವಿಕೆಟ್​ಗಳನ್ನು ಕಳೆದುಕೊಂಡು 212 ರನ್​ ಗಳಿಸಿದೆ. ಇದೀಗ 213ರ ಗುರಿಯೊಂದಿಗೆ ಆಸ್ಟ್ರೇಲಿಯಾ ಬ್ಯಾಟಿಂಗ್​ಗೆ ಇಳಿದಿದೆ.
ಇಂದಿನ ಸೆಮಿಫೈನಲ್ಸ್​ನಲ್ಲಿ ಯಾರು ಗೆಲ್ಲುತ್ತಾರೆ ಎಂಬುದಕ್ಕಿಂತ ಫೈನಲ್ಸ್​ನಲ್ಲಿ ಭಾರತದ ಎದುರಾಳಿಯಾಗಿ ಯಾವ ತಂಡ ಸೆಣಸಲಿದೆ ಎಂಬುದೇ ಕ್ರಿಕೆಟ್ ಅಭಿಮಾನಿಗಳಲ್ಲಿ ದೊಡ್ಡ ಕುತೂಹಲವಾಗಿ ಕಾಣಿಸುತ್ತಿದೆ. ಇದರ ನಡುವೆಯೇ ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ಸಂತೋಷದ ಸಂಗತಿ ಎದುರಾಗಿದೆ.
ಇದನ್ನೂ ಓದಿ:ಎಂ. ಚಿನ್ನಸ್ವಾಮಿ ಸ್ಟೇಡಿಯಂ ಎಲ್ಲರಿಗೂ ಗೊತ್ತು: ಆದರೆ ಈ ಕ್ರೀಡಾಂಗಣಕ್ಕೆ ಯಾಕೆ ಆ ಹೆಸರು ಬಂತು?
ಅದೇನೆಂದರೆ, ನ. 19ರಂದು ನಡೆಯಲಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಕ್ಷಿಯಾಗಲಿದ್ದಾರೆ. ಅಂದರೆ ಅಹಮದಾಬಾದ್​ನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತದ ಆಟವನ್ನು ಪ್ರಧಾನಿ ಮೋದಿ ವೀಕ್ಷಿಸಲಿದ್ದಾರೆ ಎನ್ನಲಾಗಿದೆ.
ಜಗತ್ತಿನ ಅತಿದೊಡ್ಡ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಈ ಫೈನಲ್​ ಸೆಣಸಾಟ ನಡೆಯಲಿದ್ದು, ಪ್ರಧಾನಿ ಅದನ್ನು ವೀಕ್ಷಿಸುವ ಮೂಲಕ ಭಾರತದ ಕ್ರಿಕೆಟಿಗರ ಹುರುಪನ್ನು ಮತ್ತಷ್ಟು ಹೆಚ್ಚಿಸಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?
ಈ ವರ್ಷದ ಆರಂಭದಲ್ಲಿ ಬಾರ್ಡರ್​-ಗವಾಸ್ಕರ್ ಸರಣಿಯ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಆಟವನ್ನು ಪ್ರಧಾನಿ ವೀಕ್ಷಿಸಿದ್ದು, ಅದಾದ ಬಳಿಕ ಅವರು ನೇರವಾಗಿ ಯಾವುದೇ ಕ್ರಿಕೆಟ್ ಪಂದ್ಯ ವೀಕ್ಷಿಸಲಿಲ್ಲ.
ವಿಶ್ವಕಪ್ ಕ್ರಿಕೆಟ್​, ಇಂದು ಗೆಲುವು ಯಾರಿಗೆ?: ಇಲ್ಲಿದೆ ಮಾಹಿತಿ; ಈತ ನಿನ್ನೆಯ ಸೆಮಿಫೈನಲ್ ಬಗ್ಗೆ ಮೊನ್ನೆ ಹೇಳಿದ್ದೂ ನಿಜವಾಗಿತ್ತು!

ಶಮಿಗೆ ಏಳು ವಿಕೆಟ್: ಏನಿದು ಅಚ್ಚರಿ.. ಆತನೊಬ್ಬ ನಿನ್ನೆ ಕಂಡ ಕನಸು ಇಂದು ನಿಜವಾಯ್ತು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × five =
Remember me
